ರಾಹುಲ್ ಗಾಂಧಿ ಪಕ್ಷ ಮರು ಸಂಘಟಿಸಲು ಸ್ವತಂತ್ರರು: ಕಾಂಗ್ರೆಸ್ ಮುಖ್ಯಮಂತ್ರಿಗಳು

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನ ಬೇಡವೆಂದು ಹಠ ಹಿಡಿದಿರುವ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್...
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನ ಬೇಡವೆಂದು ಹಠ ಹಿಡಿದಿರುವ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧಿಕಾರದಲ್ಲಿರುವ ಐದು ರಾಜ್ಯಗಳ ಮುಖ್ಯಮಂತ್ರಿಗಳು ಸೋಮವಾರ ಭೇಟಿ ಮಾಡಿ ಮನವೊಲಿಸುವ ಯತ್ನ ಮಾಡಿದರು.
ರಾಹುಲ್ ಗಾಂಧಿ ಜತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಪಕ್ಷ ಮರು ಸಂಘಟಿಸಲು ನೀವು ಸ್ವತಂತ್ರರು ಎಂದು ಅವರಿಗೆ ಹೇಳಿದ್ದೇವೆ. ಅವರು ತಮ್ಮ ಮುಂದಿನ ನಡೆಯ ಬಗ್ಗೆ ನಿರ್ಧರಿಸಲಿದ್ದಾರೆ ಎಂದರು.
ರಾಹುಲ್ ಗಾಂಧಿ ಅವರು ನಮ್ಮೊಂದಿಗೆ ಮುಕ್ತವಾಗಿ ಚರ್ಚಿಸಿದರು. ನಮ್ಮ ಅಭಿಪ್ರಾಯಗಳನ್ನು ಗಂಭೀರವಾಗಿ ಆಲಿಸಿದ್ದಾರೆ. ಪಕ್ಷದಲ್ಲಿ ನೀವು ಯಾರನ್ನೂ ಬೇಕಾದರೂ ಬದಲಿಸಲು ಮತ್ತು ಪಕ್ಷ ಮರು ಸಂಘಟಿಸಲು ಸಂಪೂರ್ಣ ಸ್ವತಂತ್ರರು ಎಂದು ಅವರಿಗೆ ಹೇಳಿದ್ದೇವೆ ಎಂದರು.
ಈ ಸಭೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್, ಛತ್ತೀಸ್‌ಗಢದ ಸಿಎಂ ಭೂಪೇಶ್ ಬಾಗೆಲ್ ಮತ್ತು ಪುದುಚೇರಿ ಸಿಎಂ ವಿ ನಾರಾಯಣಸಾಮಿ ಅವರು ಭಾಗವಹಿಸಿದ್ದರು.
ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ ಎರಡು ದಿನಗಳ ನಂತರ ಮೇ 25ರಂದು ನಡೆದ ಮೊದಲ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ, ಪಕ್ಷದ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆ ಪ್ರಸ್ತಾಪವನ್ನು ಸಿಡಬ್ಲ್ಯುಸಿ ತಿರಸ್ಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com