ಐಎನ್ಎಕ್ಸ್ ಪ್ರಕರಣದಲ್ಲಿ ಇಂದ್ರಾಣಿ ಮುಖರ್ಜಿ ಸಾಕ್ಷಿದಾರಳಾಗಲು ಕೋರ್ಟ್ ಅಸ್ತು

ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದರಂಬಂ ಭಾಗಿಯಾಗಿರುವ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ,
ಇಂದ್ರಾಣಿ ಮುಖರ್ಜಿ
ಇಂದ್ರಾಣಿ ಮುಖರ್ಜಿ
ನವದೆಹಲಿ: ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದರಂಬಂ ಭಾಗಿಯಾಗಿರುವ ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ, ಐಎನ್ಎಕ್ಸ್ ಮೀಡಿಯಾ ಮಾಜಿ ನಿರ್ದೇಶಕಿ ಇಂದ್ರಾಣಿ ಮುಖರ್ಜಿ ಅವರು ಸಾಕ್ಷಿ ಹೇಳಲು(ಅಪ್ರೂವರ್) ಸಿಬಿಐ ವಿಶೇಷ ಕೋರ್ಟ್ ಗುರುವಾರ ಅನುಮತಿ ನೀಡಿದೆ.
ಇಂದ್ರಾಣಿ ಮುಖರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ನಿರ್ದೇಶಕ ಅರುಣ್ ಭಾರದ್ವಾಜ್ ಅವರು, ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಾಕ್ಷಿದಾರಗಳಾಗಲು ಅನುಮತಿ ನೀಡಿ, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದ್ದಾರೆ.
ಪುತ್ರಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಇಂದ್ರಾಣಿ ಮುಖರ್ಜಿ ಸದ್ಯ ಬೈಕುಲಾ ಜೈಲಿನಲ್ಲಿದ್ದು, ಕಳೆದ ವರ್ಷ ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಬಳಿಕ ಸಾಕ್ಷಿದಾರಳಾಗಲು ಒಪ್ಪಿಗೆ ಕೋರಿ ಸಿಬಿಐ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಐಎನ್‌ಎಕ್ಸ್‌ ಮಾಧ್ಯಮ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com