ಗೌರಿ ಲಂಕೇಶ್ ಹತ್ಯೆ ಕುರಿತು ವಿವಾದಾತ್ಮಕ ಹೇಳಿಕೆ: ಕೋರ್ಟ್ ಗೆ ಹಾಜರಾದ ರಾಹುಲ್ ಗಾಂಧಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಕ್ಕೆ ಹೋಲಿಸಿದ ಕಾರಣಕ್ಕೆ ...
ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ
ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ
ಮುಂಬೈ; ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬಿಜೆಪಿ-ಆರ್ ಎಸ್ಎಸ್ ಸಿದ್ದಾಂತಕ್ಕೆ ಹೋಲಿಸಿದ ಕಾರಣಕ್ಕೆ ಆರ್ ಎಸ್ ಎಸ್ ಕಾರ್ಯಕರ್ತ ಸಲ್ಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಸಂಸದ ರಾಹುಲ್ ಗಾಂಧಿ ಗುರುವಾರ ಮುಂಬೈನ ಶಿವಡಿ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಮತ್ತು ವಕೀಲ ದ್ರುತಿಮನ್ ಜೋಷಿ ಸಲ್ಲಿಸಿದ್ದ ದೂರಿಗೆ ಸಂಬಂಧಪಟ್ಟಂತೆ ಮುಂಬೈಯ ಮಝ್ ಗೌನ್ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ಫೆಬ್ರವರಿಯಲ್ಲಿ ರಾಹುಲ್ ಗಾಂಧಿ ಮತ್ತು ಸಿಪಿಎಂ ಮುಖಂಡ ಸೀತಾರಾಮ್ ಯೆಚೂರಿ ಅವರಿಗೆ ಸಮ್ಮನ್ಸ್ ಜಾರಿ ಮಾಡಿತ್ತು.
ದ್ರುತಿಮನ್ ಜೋಷಿ 2017ರಲ್ಲಿ ಗೌರಿ ಲಂಕೇಶ್ ಹತ್ಯೆ ಕೇಸಿಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ರಾಹುಲ್ ಗಾಂಧಿ, ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸೀತಾರಾಮ್ ಯೆಚೂರಿ ವಿರುದ್ಧ ಪೊಲೀಸರಿಗೆ ವಿಚಾರಣೆ ನಡೆಸಲು ಕೋರ್ಟ್ ಆದೇಶ ನೀಡಬೇಕೆಂದು ಖಾಸಗಿ ದೂರು ಸಲ್ಲಿಸಿದ್ದರು.
ಪತ್ರಕರ್ತೆ ಗೌರಿ ಲಂಕೇಶ್ 2017ರ ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರಿನ ತಮ್ಮ ನಿವಾಸದ ಹೊರಗೆ ರಾತ್ರಿ ವೇಳೆ ಗುಂಡೇಟಿಗೆ ಹತ್ಯೆಯಾಗಿದ್ದರು. 
ಅವರು ಹತ್ಯೆಯಾದ 24 ಗಂಟೆಗಳೊಳಗೆ ರಾಹುಲ್ ಗಾಂಧಿಯವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿ, ಆರ್ ಎಸ್ಎಸ್ ನ ತತ್ವ, ಸಿದ್ದಾಂತಗಳಿಗೆ ವಿರುದ್ಧವಾಗಿ ಮಾತನಾಡುವವರ ಮೇಲೆ ಒತ್ತಡ ಹಾಕಿ, ಬೆದರಿಕೆ ಹಾಕಿ ಹೊಡೆದು, ದಾಳಿ ಮಾಡಿ ಕೊಲ್ಲಲಾಗುತ್ತದೆ ಎಂದು ಹೇಳಿದ್ದರು.
ಆರ್ ಎಸ್ಎಸ್ ಸಿದ್ದಾಂತ ಪಾಲಿಸುವವರು ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಗೌರಿ ಲಂಕೇಶ್ ಹತ್ಯೆ ಮಾಡಿದ್ದಾರೆ ಎಂದು ಸೀತಾರಾಮ್ ಯೆಚೂರಿ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com