ದೇಶ

ಕಾಶ್ಮೀರದಲ್ಲಿ ಎನ್ ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಶುಕ್ರವಾರ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಹಿಜ್ಜುಲ್ ಮುಜಾಹಿದ್ದೀನ್ ....

ಕಾಶ್ಮೀರದಲ್ಲಿ ಎನ್ ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಶುಕ್ರವಾರ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಹಿಜ್ಜುಲ್ ಮುಜಾಹಿದ್ದೀನ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಇಮಾನ್ ಸಾಹಿಬ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ. 
ಹತ್ಯೆಯಾದ ಉಗ್ರನನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಮೀರ್ ಸೆಹ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.