ಲಾಲ್ ಬಹದ್ದೂರ್ ಶಾಸ್ತ್ರಿ ಕಂಚಿನ ಪ್ರತಿಮೆ
ಲಾಲ್ ಬಹದ್ದೂರ್ ಶಾಸ್ತ್ರಿ ಕಂಚಿನ ಪ್ರತಿಮೆ

ವಾರಣಾಸಿ ವಿಮಾನ ನಿಲ್ದಾಣ: ಪ್ರಧಾನಿ ಮೋದಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಕಂಚಿನ ಪ್ರತಿಮೆ ಅನಾವರಣ

ಪ್ರಧಾನಿ ನರೇಂದ್ರ ಮೋದಿ ಶನಿವಾರ ವಾರಣಾಸಿಯ ಬಾಬತ್‌ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ....
Published on
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ವಾರಣಾಸಿಯ  ಬಾಬತ್‌ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 18 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು
ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪಿಎಂ ಮತ್ತು ಇತರ ಗಣ್ಯರು  ಪುಷ್ಪ ನಮನ ಸಲ್ಲಿಸಿದರು.
ಸರಳ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಯುಪಿ ಬಿಜೆಪಿ ಅಧ್ಯಕ್ಷ ಮಹೇಂದ್ರ ನಾಥ್ ಪಾಂಡೆ ಉಪಸ್ಥಿತರಿದ್ದರು
ಶಾಸ್ತ್ರಿ ಅವರ ಪ್ರತಿಮೆಯನ್ನು ಖ್ಯಾತ ಶಿಲ್ಪಿ ರಾಮ್ ವಂಜಿ ಸುತಾರ್ ನಿರ್ಮಿಸಿದ್ದು ಇದೇ ಸುತಾರ್ ಹಿಂದೆ ಸರ್ದಾರ್ ಪಟೇಲ್ ಅವರ 182 ಮೀಟರ್ ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದರು. ಶಾಸ್ತ್ರಿ ಅವರ ಪ್ರತಿಮೆಯನ್ನು ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ, ಇದನ್ನು ನಾರ್ದರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ (ಎನ್‌ಸಿಎಲ್) ಪ್ರಾಯೋಜಕತ್ವದಲ್ಲಿ ತಯಾರಿಸಲಾಗಿದೆ.
2005ರಲ್ಲಿ ವಾರಣಾಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಲಾಲ್ ಬಹದ್ದೂರ್ ಶಾಸ್ತ್ರಿ ಹೆಸರಿಡಲಾಯಿತು. 2014 ರಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ನ ಪ್ರವೇಶ ಮಂಟಪದಲ್ಲಿ ಶಾಸ್ತ್ರಿ ಅವರ ಸಣ್ಣ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿ ರಾಮ್ ನಗರದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com