ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚೆ

ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ನವದೆಹಲಿಯಲ್ಲಿ ನಡೆದಿರುವ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚಿಸಲಾಗಿದೆ.
ಕಾಂಗ್ರೆಸ್ ಮುಖಂಡರು
ಕಾಂಗ್ರೆಸ್ ಮುಖಂಡರು
Updated on
ನವದೆಹಲಿ: ಕರ್ನಾಟಕದಲ್ಲಿನ  ರಾಜಕೀಯ  ಬೆಳವಣಿಗೆ ಕುರಿತಂತೆ ನವದೆಹಲಿಯಲ್ಲಿ ನಡೆದಿರುವ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆಯಲ್ಲಿ ನಾಯಕತ್ವ ಸಮಸ್ಯೆ ಬಗ್ಗೆ ಚರ್ಚಿಸಲಾಗಿದೆ. ಆದರೆ, ಯಾರ ಹೆಸರನ್ನೂ ಉಲ್ಲೇಖಿಸಿ  ಚರ್ಚೆ ನಡೆಸಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯವರೆಗೂ ಈ ಚರ್ಚೆ ಮುಂದುವರೆಯುವ ಸಾಧ್ಯತೆ ಇದೆ. ಆದಾಗ್ಯೂ, ಸಭೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ರಾಹುಲ್ ಗಾಂಧಿ ಈಗಲೂ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಶಾಸಕರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್   ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜಿವಾಲಾ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಪರಿಣಾಮಕಾರಿಯಾಗಿ ಹೋರಾಟ ನಡೆಸುವಲ್ಲಿ ರಾಹುಲ್  ಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಬೇಕೆಂಬುದು ಕೋಟ್ಯಾಂತರ ಪಕ್ಷದ ಕಾರ್ಯಕರ್ತರ ಮನೋಭಾವವಾಗಿದೆ.  ಕರ್ನಾಟಕ ಶಾಸಕರ ರಾಜೀನಾಮೆ ವಿಚಾರದಲ್ಲಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.
ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂಬುದು ಮಾಧ್ಯಮಗಳ ಸೃಷ್ಟಿಯಾಗಿದೆ. ಇವರಿಬ್ಬರೂ ಸಭೆಯ ಪ್ರಮುಖ ಪಾತ್ರವಹಿಸಲಿದ್ದಾರೆ.ಕಾರ್ಯಕಾರಿ ಸಮಿತಿ ಸಭೆ ಸದ್ಯದಲ್ಲೇ ನಡೆಯಲಿದೆ ಎಂದು ಸುರ್ಜಿವಾಲಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com