ಶರವಣ ಭವನ ಮಾಲೀಕ ರಾಜಗೋಪಾಲ್
ಶರವಣ ಭವನ ಮಾಲೀಕ ರಾಜಗೋಪಾಲ್

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಶರಣಾದ ಶರವಣ ಭವನ ಮಾಲೀಕ

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ಕೊನೆಗೂ ಮಂಗಳವಾರ...
ನವದೆಹಲಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ಕೊನೆಗೂ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ರಾಜಗೋಪಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ಅಪರಾಧಿ ಸೆಷನ್ಸ್ ಕೋರ್ಟ್ ಮುಂದೆ ಶರಣಾಗಿದ್ದಾರೆ.
ಅನಾರೋಗ್ಯದ ಕಾರಣ ನೀಡಿ, ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ರಾಜಗೋಪಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್ ವಿ ರಾಮಣ್ಣ  ನೇತೃತ್ವದ ಪೀಠ ತಿರಸ್ಕರಿಸಿತ್ತು.
2001 ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷಗೆ ಗುರಿಯಾಗಿರುವ ರಾಜಾ ಗೋಪಾಲ್ ಜುಲೈ 7 ರಂದು ಕೋರ್ಟ್ ಗೆ ಶರಣಾಗಬೇಕಿತ್ತು. ಆದರೆ ಅವರು ಶರಣಾಗಿರಲಿಲ್ಲ.
ಕಳೆದ ಕೆಲವು ದಿನಗಳಿಂದ ಇಲ್ಲಿನ ಅಶೋಕನಗರದ ಮನೆಯಲ್ಲಿ ವಾಸವಿದ್ದ ರಾಜಗೋಪಾಲ್‌ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದ ಕಾರಣ ಹೇಳಿಯೇ ಅವರು ತಮ್ಮ ಶರಣಾಗತಿಯನ್ನು ಅವಧಿಯನ್ನು ವಿಸ್ತರಿಸಲು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ತನ್ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನ ಹೆಂಡತಿಯನ್ನು ಮದುವೆಯಾಗುವ ದುರುದ್ದೇಶದಿಂದ 2001ರ ಅಕ್ಟೋಬರ್‌ನಲ್ಲಿ ನೌಕರನನ್ನು ಅಪಹರಿಸಿ ಕೊಲೆ ಮಾಡಿದ್ದ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ಗೆ ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದು, ಜುಲೈ 7ರ ಒಳಗೆ ಶರಣಾಗಬೇಕು ಎಂದು ಸೂಚಿಸಿತ್ತು.

Related Stories

No stories found.

Advertisement

X
Kannada Prabha
www.kannadaprabha.com