ಕೈಯಲ್ಲಿ ಗನ್, ಮದ್ಯದ ಗ್ಲಾಸ್ ಹಿಡಿದು ಡ್ಯಾನ್ಸ್ ಮಾಡಿದ ಬಿಜೆಪಿ ಶಾಸಕ, ವಿಡಿಯೋ ವೈರಲ್

ಈಗಾಗಲೇ ಪಕ್ಷದಿಂದ ಅಮಾನತುಗೊಂಡಿರುವ ಉತ್ತರಾಖಂಡ್‍ನ ವಿವಾದಾತ್ಮಕ ಬಿಜೆಪಿ ಶಾಸಕ ಪ್ರಣವ್ ಚಾಂಪಿಯನ್ ಅವರು ಈಗ ಎರಡು ಕೈಯಲ್ಲಿ ಗನ್...
ಬಿಜೆಪಿ ಶಾಸಕ ಪ್ರಣವ್
ಬಿಜೆಪಿ ಶಾಸಕ ಪ್ರಣವ್
Updated on: 
ಡೆಹ್ರಾಡೂನ್: ಈಗಾಗಲೇ ಪಕ್ಷದಿಂದ ಅಮಾನತುಗೊಂಡಿರುವ ಉತ್ತರಾಖಂಡ್‍ನ ವಿವಾದಾತ್ಮಕ ಬಿಜೆಪಿ ಶಾಸಕ ಪ್ರಣವ್ ಚಾಂಪಿಯನ್ ಅವರು ಈಗ ಎರಡು ಕೈಯಲ್ಲಿ ಗನ್ ಗಳನ್ನು ಹಿಡಿದು ಡ್ಯಾನ್ಸ್ ಮಾಡುವ ಮೂಲಕ ಮತ್ತೆ ವಿವಾದಕ್ಕಿಡಾಗಿದ್ದಾರೆ.
ಬಿಜೆಪಿ ಶಾಸಕ ಪ್ರಣವ್ ತನ್ನ ಎರಡು ಕೈಯಲ್ಲಿ ಗನ್ ಗಳನ್ನು ಹಿಡಿದುಕೊಂಡು, ಅಶ್ಲೀಲ ಪದಗಳನ್ನು ಬಳಸಿ ಬೈಯುತ್ತ, ಬಾಲಿವುಡ್ ನ ಐಟಮ್ ಹಾಡಿಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಪ್ಪು ಬಣ್ಣದ ಬನಿಯನ್ ಹಾಗೂ ಬಿಳಿ ಪ್ಯಾಂಟ್ ಧರಿಸಿ, ಎರಡೂ ಕೈಯ್ಯಲ್ಲಿ ನಾಲ್ಕು ಗನ್ ಹಿಡಿದುಕೊಂಡು, ಮೊಣಕಾಲ ಮೇಲೆ ಮದ್ಯಪಾನದ ಗ್ಲಾಸ್ ಇಟ್ಟುಕೊಂಡು, ಡ್ಯಾನ್ಸ್ ಮಾಡುತ್ತ ಪೋಸ್ ನೀಡಿದ್ದಾರೆ. ಶಾಸಕರ ಜೊತೆ ಸಹಚರರು ಸಹ ಡ್ಯಾನ್ಸ್ ಮಾಡಿದ್ದು, ಸುಮಾರು 1.45 ನಿಮಿಷಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಬಿಜೆಪಿ ಶಾಸಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಈ ಕುರಿತು ಎಚ್ಚರ ವಹಿಸಿದ್ದು, ಗನ್ ಹಾಗೂ ಶಸ್ತ್ರಾಸ್ತ್ರಗಳಿಗೆ ಪರವಾನಿಗೆ ಇದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ಸಹ ಈ ಕುರಿತು ಖಂಡನೆ ವ್ಯಕ್ತಪಡಿಸಿದ್ದು, ಶಾಸಕನ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.
ನಾನು ಈ ವಿಡಿಯೋವನ್ನು ಗಮನಿಸಿದ್ದು, ಶಾಸಕ ಪ್ರಣವ್ ಸಿಂಗ್ ಇಂತಹ ವರ್ತನೆಗಳಿಂದಲೇ ಹೆಚ್ಚು ಪ್ರಸಿದ್ದಿ ಪಡೆದಿದ್ದಾರೆ. ಹೀಗಾಗಿಯೇ ಈ ಹಿಂದೆ ಮೂರು ತಿಂಗಳುಗಳ ಕಾಲ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಘಟನೆ ಕುರಿತು ಉತ್ತರಾಖಂಡ್ ರಾಜ್ಯ ಬಿಜೆಪಿ ಜೊತೆ ಮಾತನಾಡಿ ಕಠಿಣ ಕ್ರಮ ಕೈಗೊಳ್ಳಲಾಗುವದು ಎಂದು ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com