ನವದೆಹಲಿ: ರಾಜತಾಂತ್ರಿಕ ಮತ್ತು ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ವಿಕಾಸ್ ಸ್ವರೂಪ್ ಅವರನ್ನು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.ಸಚಿವ ಸಂಪುಟ ಸಮಿತಿಯು ವಿಕಾಸ್ ಸ್ವರೂಪ್ ಅವರ ನೇಮಕಕ್ಕೆ ಅನುಮತಿ ನೀಡಿದ್ದು, ಆಗಸ್ಟ್ 1 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ಶುಕ್ರವಾರ ತಿಳಿಸಿದೆ. .ಪ್ರಸಕ್ತ ಒಟ್ಟಾವಾದಲ್ಲಿ ಭಾರತೀಯ ಹೈಕಮಿಷನರ್ ಆಗಿ ಕಾರ್ಯನಿರ್ಹಿಸುತ್ತಿರುವ ವಿಕಾಸ್ ಸ್ವರೂಪ್, 1986ನೇ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿದ್ದಾರೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics