ದೆಹಲಿ: ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ,ಐವರು ದುರ್ಮರಣ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಂದು ಸಂಭವಿಸಿದ ಬೃಹತ್ ಬೆಂಕಿ ಅವಘಡದಲ್ಲಿ ಐವರು ದುರ್ಮರಣ ಹೊಂದಿದ್ದಾರೆ.
ಕಾರ್ಖಾನೆಯಲ್ಲಿ ಬೆಂಕಿ
ಕಾರ್ಖಾನೆಯಲ್ಲಿ ಬೆಂಕಿ
Updated on: 
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಂದು ಸಂಭವಿಸಿದ ಬೃಹತ್ ಬೆಂಕಿ ಅವಘಡದಲ್ಲಿ ಐವರು ದುರ್ಮರಣ ಹೊಂದಿದ್ದಾರೆ. 
ಶಹದಾರಾ ಜಿಲ್ಮೀಲ್  ಕೈಗಾರಿಕಾ ಪ್ರದೇಶದ ಹಾರ್ಡ್ ವೇರ್ ಕಾರ್ಖಾನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಕಾರ್ಖಾನೆಯ ಒಳಗಡೆ ಬೆಂಕಿಯಿಂದಾಗಿ ಮೃತಪಟ್ಟಿದ್ದ ಮೂವರ ಮೃತದೇಹಗಳನ್ನು ಹೊರಗೆ ತರಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ವೇದ್ ಪ್ರಕಾಶ್ ಸೂರ್ಯ ಹೇಳಿದ್ದಾರೆ.
9-25ರ ವೇಳೆಗೆ ಬೆಂಕಿ ಬಿದ್ದಿರುವ ಬಗ್ಗೆ ಮಾಹಿತಿ ತಿಳಿದು ಸುಮಾರು 30 ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com