ಜೀವದ ಹಂಗು ತೊರೆದು ಭಾರತೀಯ ಯೋಧರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಬಾಲಕಿ ರಕ್ಷಣೆ: ವಿಡಿಯೋ ವೈರಲ್

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನದಿಯಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ಸಿಆರ್ ಪಿಎಫ್ ಯೋಧರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನದಿಯಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ಸಿಆರ್ ಪಿಎಫ್ ಯೋಧರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಪ್ಪತ್ತೈದು ಸೆಕೆಂಡುಗಳ  ವಿಡಿಯೋದಲ್ಲಿ, 14 ವರ್ಷ ವಯಸ್ಸಿನ ಬಾಲಕಿ ನಾಗೀನಾ ಮುಳುಗುತ್ತಿದ್ದ ನದಿಯ ಕಡೆಗೆ ಐವರು ಸಿಆರ್ ಪಿಎಫ್ ಯೋಧರು ಧಾವಿಸುತ್ತಿರುವ ದೃಶ್ಯವಿದೆ.
ಫೇಸ್ ಬುಕ್, ವಾಟ್ಸಾಪ್ ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಯೋಧರ ಕಾರ್ಯವನ್ನ ನೆಟ್ಟಿಗರು ಹಾಡಿ ಹೊಗಳಿದ್ದಾರೆ.  ವಿಡಿಯೋ ಜೊತೆಗೆ ರಕ್ಷಿಸಲ್ಪಟ್ಟ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾವಚಿತ್ರವನ್ನು ಶೇರ್ ಮಾಡಲಾಗಿದೆ.
ಯಾವುದೇ ಸಂದರ್ಭದಲ್ಲೂ ಪ್ರಾಣವನ್ನು ಪಣಕ್ಕಿಟ್ಟು ರಕ್ಷಣೆಗೆ ಮುಂದಾಗುವ ಸೈನಿಕರ ಬಗ್ಗೆ ಹೃತ್ಪೂರ್ವಕ ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ. ನಿಜವಾದ ಹೀರೋಗಳಿಗೆ ಸೆಲ್ಯೂಟ್ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com