ಮುಸ್ಲಿಮರು ಪ್ರತಿ ಶುಕ್ರವಾರದಂದು ನಡು ರಸ್ತೆಯಲ್ಲಿ ನಮಾಜ್ ಮಾಡುವುದರಿಂದ ರಸ್ತೆಯಲ್ಲಿ ಸಂಚಾರ ಮಾಡುವವರಿಗೆ ಸಮಸ್ಯೆ ಉಂಟಾಗುತ್ತಿದೆ. ಅವರು ಈ ಅಭ್ಯಾಸವನ್ನು ಬಿಟ್ಟರೆ ನಾವೂ ಹನುಮಾನ್ ಚಾಲಿಸಾ ಪಠಣ ನಿಲ್ಲಿಸುವುದಾಗಿ ಹೇಳಿದ್ದಾರೆ. ಘಟನೆ ಬಗ್ಗೆ ಪೊಲೀಸರು ಮೌನ ವಹಿಸಿದ್ದು, ನಡು ರಸ್ತೆಯಲ್ಲಿ ನಮಾಜ್ ಮಾಡುವುದರ ಬಗ್ಗೆ ಯಾರಿಂದಲೂ ದೂರು ಬಂದಿಲ್ಲ. ಆದ್ದರಿಂದ ಈ ವಿಷಯದಲ್ಲಿ ನಮ್ಮ ಮಧ್ಯಪ್ರವೇಶ ಇಲ್ಲ ಎಂದು ಹೇಳಿದ್ದಾರೆ.