ಟ್ರಂಪ್ ಜೊತೆಗೆ ಮಧ್ಯಸ್ಥಿಕೆ ಸಭೆ: ಪ್ರಧಾನಿ ರಾಷ್ಟ್ರಕ್ಕೆ ತಿಳಿಸಬೇಕು- ರಾಹುಲ್ ಗಾಂಧಿ

ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಮೋದಿ ತಮ್ಮನ್ನು ಕೇಳಿದ್ದರು ಎಂಬುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ಇದು ಸತ್ಯವಾದಲ್ಲಿ ಮೋದಿ ದೇಶದ ಹಿತಾಸಕ್ತಿ ಹಾಗೂ 1972ರ ಶಿಮ್ಲಾ ಒಪ್ಪಂದಕ್ಕೆ ದ್ರೋಹ ಬಗೆದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ:ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮತ್ತು ಭಾರತ ನಡುವಣ ಮಧ್ಯಸ್ಥಿಕೆ ವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು  ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರಾ ಎಂಬುದರ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವಂತೆ  ನಿರ್ಗಮಿತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಮೋದಿ ತಮ್ಮನ್ನು ಕೇಳಿದ್ದರು ಎಂಬುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ಇದು ಸತ್ಯವಾದಲ್ಲಿ ಮೋದಿ ದೇಶದ ಹಿತಾಸಕ್ತಿ ಹಾಗೂ 1972ರ ಶಿಮ್ಲಾ ಒಪ್ಪಂದಕ್ಕೆ ದ್ರೋಹ ಬಗೆದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.
ದುರ್ಬಲ ವಿದೇಶಾಂಗ ಸಚಿವಾಲಯ ಇದನ್ನು ನಿರಾಕರಿಸುತ್ತಿಲ್ಲ. ಡೊನಾಲ್ಡ್ ಟ್ರಂಪ್ ಜೊತೆಗಿನ ಸಭೆಯಲ್ಲಿ ಏನಾಯಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ತಿಳಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ   ಒತ್ತಾಯಿಸಿದ್ದಾರೆ. 
ಡೊನಾಲ್ಡ್ ಟ್ರಂಪ್ ಹೇಳಿಕೆ ಕುರಿತಂತೆ ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿತ್ತು.  ಲೋಕಸಭೆಯಲ್ಲೂ ಕೆಲಕಾಲ ಕಲಾಪವನ್ನು ಮುಂದೂಡಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com