ರಾಹುಲ್ ಅತಿ ವೇಗವಾಗಿ ಬೈಕ್ ಚಲಾಯಿಸುತ್ತ ಫೇಸ್ ಬುಕ್ ಲೈವ್ ಮಾಡುತ್ತಿದ್ದಾಗ, ಇದ್ದಕ್ಕಿದ್ದಂತೆ ಬೈಲಿ ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ರಾಹುಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಸುಮನ್ ಗಂಭೀರವಾಗಿ ಗಾಯಗೊಂಡರು. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನೂ ಅಗರ್ತಲಾ ಆಸ್ಪತ್ರೆಗೆ ಸಾಗಿಸಿದರಾದರೂ, ರಾಹುಲ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎನ್ನಲಾಗಿದೆ.