ಶಿವರಾಜ್ ಸಿಂಗ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಜಿತು ಪಟ್ವಾರಿ ಪ್ರತಿಕ್ರಿಯೆ ನೀಡಿದ್ದು, ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಸಮಸ್ಯೆಗಳನ್ನು ತಂದೊಡ್ಡುವುದಕ್ಕೆ ಬಿಜೆಪಿ ಎಲ್ಲವನ್ನೂ ಮಾಡಿದೆ. ಕುಮಾರಸ್ವಾಮಿ ಸರ್ಕಾರವನ್ನು ಅಷ್ಟೇ ಅಲ್ಲದೇ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನೂ ಸಹ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.