ಭುವನೇಶ್ವರ್: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬಿಜೆಪುರ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಾರ್ಘರ್ ಜಿಲ್ಲೆಯಲ್ಲಿರುವ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಸಿಎಂ ಪಟ್ನಾಯಕ್ ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ವಿಧಾನಸಭಾ ಚುನಾವಣೆ ವೇಳೆ ನವೀನ್ ಪಟ್ನಾಯಕ್ 2 ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಹಿಂಜ್ಲಿ ಹಾಗೂ ಬಿಜೆಪುರ್ ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಪಟ್ನಾಯಕ್ ಈಗ ಹಿಂಜ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಹಿಂಜ್ಲಿ ವಿಧಾನಸಭಾ ಕ್ಷೇತ್ರವನ್ನು ಪಟ್ನಾಯಕ್ 2000 ರಿಂದಲೂ ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿ ಪ್ರಾಬಲ್ಯ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ನವೀನ್ ಪಟ್ನಾಯಕ್ ಬಿಜೆಡಿಯನ್ನು ಬಲಪಡಿಸಲು 2 ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.