ಟಿಟ್ ಫಾರ್ ಟ್ಯಾಟ್: ಮೋದಿ ಸಂಪುಟದಲ್ಲಿ ಜೆಡಿಯುಗೆ 1 ಸ್ಥಾನ, ನಿತೀಶ್ ಸಂಪುಟದಲ್ಲಿ ಬಿಜೆಪಿ ಸಚಿವರ ಸಂಖ್ಯೆ ಇಳಿಕೆ

ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಯುಗೆ ಒಂದೇ ಒಂದು ಸ್ಥಾನ ನೀಡದೇ ಇರುವುದಕ್ಕೆ ನಿತೀಶ್ ಕುಮಾರ್ ಬಿಹಾರದ ಸಚಿವ ಸಂಪುಟದಲ್ಲಿ ಬಿಜೆಪಿ ಸಂಖ್ಯೆಯನ್ನೂ ಇಳಿಕೆ ಮಾಡಿದ್ದಾರೆ.
Updated on
ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಯುಗೆ ಒಂದೇ ಒಂದು ಸ್ಥಾನ ನೀಡದೇ ಇರುವುದಕ್ಕೆ ನಿತೀಶ್ ಕುಮಾರ್ ಬಿಹಾರದ ಸಚಿವ ಸಂಪುಟದಲ್ಲಿ ಬಿಜೆಪಿ ಸಂಖ್ಯೆಯನ್ನೂ ಇಳಿಕೆ ಮಾಡಿದ್ದಾರೆ. 
ಜೂ.02 ರಂದು ಬಿಹಾರ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 8 ಜೆಡಿಯು ನಾಯಕರನ್ನು ಸಚಿವ ಸಂಪುಟಕ್ಕೆ ತೆಗೆದುಕೊಂಡಿದ್ದು, ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದಾರೆ. 
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತ ದೊರೆತ ನಂತರ ಬಿಜೆಪಿ ಮಿತ್ರ ಪಕ್ಷಗಳನ್ನು ಕಡೆಗಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ವರದಿಗಳನ್ನು ನಿತೀಶ್ ಕುಮಾರ್ ತಳ್ಳಿಹಾಕಿದ್ದಾರೆ. ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ ಬಿಜೆಪಿ ಜೊತೆ ಮುಂದುವರೆಯುತ್ತೇವೆ ಎಂದು ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com