ದೆಹಲಿ: ಬಸ್ಸು, ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ!

ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ದೆಹಲಿಯ ಅಮ್ ಆದ್ಮಿ ಸರ್ಕಾರ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ , ಅದರ ಸಹವರ್ತಿ ಬಸ್ಸುಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ  ದೆಹಲಿಯ ಅಮ್ ಆದ್ಮಿ ಸರ್ಕಾರ ಮಹಿಳೆಯರಿಗೆ ಬಂಪರ್ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ , ಅದರ ಸಹವರ್ತಿ ಬಸ್ಸುಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಯೋಜನೆ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯ ಎಲ್ಲಾ ನಗರ ಸಾರಿಗೆ ಬಸ್ಸುಗಳು ಹಾಗೂ ಅದರ ಸಹವರ್ತಿ ಬಸ್ಸುಗಳು, ಮೆಟ್ರೋ ರೈಲುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ಸುರಕ್ಷಿತ ಪ್ರಯಾಣದ ಅನುಭವ ಹೊಂದಲಿದ್ದಾರೆ ಎಂದಿರುವ  ಅರವಿಂದ್ ಕೇಜ್ರಿವಾಲ್ ,ವಿದ್ಯುತ್ ಶುಲ್ಕವನ್ನು ಕಡಿಮೆಗೊಳಿಸಲು ನಗರದ ವಿದ್ಯುತ್ ಪ್ರಾಧಿಕಾರದೊಂದಿಗೆ ಸರ್ಕಾರ  ಚರ್ಚೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಯಾರೊಬ್ಬರ ಮೇಲೂ ಸಬ್ಸಿಡಿಯನ್ನು ವಿಧಿಸುವುದಿಲ್ಲ, ಅನೇಕ ಮಹಿಳೆಯರಿಗೆ ಇಂತಹ ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ.ಯಾರು ಟಿಕೆಟ್ ಖರೀದಿಸುತ್ತಾರೋ ಅಂತಹವರು  ಯಾವುದೇ ಸಬ್ಸಿಡಿ ತೆಗೆದುಕೊಳ್ಳುವ ಅಗತ್ಯವಿರುವುದಿಲ್ಲ. ಟಿಕೆಟ್ ಕೊಳ್ಳುವವರನ್ನು ಪ್ರೋತ್ಸಾಹಿಸುತ್ತವೆ. ಸಬ್ಸಿಡಿ ತೆಗೆದುಕೊಳ್ಳದಿರುವವರು ಇತರ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಯೋಜನೆಯನ್ನು ಯಾವ ರೀತಿ  ಹಾಗೂ ಯಾವಾಗ ಅನುಷ್ಠಾನಗೊಳಿಸಬೇಕೆಂಬ ಬಗ್ಗೆ ಒಂದು ವಾರದೊಳಗೆ  ಸಮಗ್ರ ಪ್ರಸ್ತಾವ ಸಲ್ಲಿಸುವಂತೆ ದೆಹಲಿ ನಗರ ಸಾರಿಗೆ ನಿಗಮ ಹಾಗೂ ಮೆಟ್ರೋ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಎರಡು ಮೂರು ತಿಂಗಳೊಳಗೆ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಲಾಗುತ್ತಿದೆ.ಅನುಷ್ಠಾನ ಸಂಬಂಧ ಜನರಿಂದ ಸಲಹೆಗಳನ್ನು ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಟಿಕೆಟ್ ದರ ಏರಿಸದಂತೆ ಕೇಂದ್ರ ಸರ್ಕಾರಕ್ಕೆ ಹೇಳಿದ್ದರೂ ಅವರು ಕೇಳಲಲಿಲ್ಲ. 50-50 ಅನುಪಾತದಲ್ಲಿ ದರ ಏರಿಕೆಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೇಳಲಾಗಿತ್ತು. ಆದರೆ, ಅದಕ್ಕೆ ಅವರು ಒಪ್ಪಲಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com