ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯಿಂದ ಸೀತಾರಾಮ್ ಕೇಸರಿ ಹೆಸರು ಡಿಲೀಟ್!
: ಭಾರತದ ಅತಿ ಹಳೆಯ ಪಕ್ಷವೆಂದು ಹೆಸರಾಗಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಸೀತಾರಾಮ್ ಕೇಸರಿಯವರ ಹೆಸರನ್ನು ಪಕ್ಷದ ಅಧ್ಯಕ್ಷರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾದ್ಯಮ ವರದಿಯೊಂದು ಹೇಳಿದೆ.
ನವದೆಹಲಿ: ಭಾರತದ ಅತಿ ಹಳೆಯ ಪಕ್ಷವೆಂದು ಹೆಸರಾಗಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಸೀತಾರಾಮ್ ಕೇಸರಿಯವರ ಹೆಸರನ್ನು ಪಕ್ಷದ ಅಧ್ಯಕ್ಷರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
1996-98ರ ಅವಧಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸೀತಾರಾಮ್ ಕೇಸರಿಯವರ ಹೆಸರನ್ನು ಕಾಂಗ್ರೆಸ್ ವೆಬ್ ಸೈಟ್ ನಲ್ಲಿನ ಅಧ್ಯಕ್ಷರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ವೆಬ್ ಸೈಟ್ ನಲ್ಲಿ 1990-2018ರ ನಡುವೆ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಹಾಗೂ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿದ್ದಾಗಿ ಉಲ್ಲೇಖಿಸಲಾಗಿದೆ
ಆದರೆ 1996ರಲ್ಲಿ ನರಸಿಂಹರಾವ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೀತಾರಾಮ್ ಕೇಸರಿ ಪಕ್ಷದ ನೂತನ ಅಧ್ಯಕ್ಷರಾಗಿದ್ದರು. ಬಿಹಾರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸೀತಾರಾಮ್ ಕೇಸರಿ ಇಂದಿರಾಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
ಸೀತಾರಾಮ್ ಕೇಸರಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗಲೇ ಕರ್ನಾಟಕದ ಎಚ್ ಡಿ ದೇವೇಗೌಡ ಭಾರತದ ಪ್ರಧಾನಿಯಾಗಿದ್ದು 1997ರಲ್ಲಿ ಕೇಸರಿ ದೇವೇಗೌಡರ ನೇತೃತ್ವದ ಯುನೈಟೆಡ್ ಫ್ರಂಟ್ ಸರ್ಕಾರಕ್ಕೆ ನೀಡಿದ ಬೆಮ್ಬಲ ಹಿಂಪಡೆಯುವ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದರು. ಕಾಂಗ್ರೆಸ್ ಬೆಂಬಲ ವಾಪಾಸ್ ಪಡೆದ ಬಳಿಕ ದೇವೇಗೌಡ ಪ್ರಧಾನಿ ಪಟ್ಟದಿಂದ ಕೆಳಗಿಳಿದು ಐ.ಕೆ. ಗುಜ್ರಾಲ್ ಪ್ರಧಾನಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು.
ಆದರೆ ಈಗ ಕಾಂಗ್ರೆಸ್ ಪಕ್ಷದ ವೆಬ್ ಸೈಟ್ ನಲ್ಲಿ ಸೀತಾರಾಮ್ ಕೇಸರಿ ಹೆಸರನ್ನು ಅಳಿಸಿ ಹಾಕಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.