ಮಹಿಳೆ ಮೇಲೆ 5 ಕಾಮುಕರಿಂದ ಸಾಮೂಹಿಕ ಅತ್ಯಾಚಾರ. ಸಾಮಾಜಿಕ ಜಾಲತಾಣಗಳಿಗೆ ವಿಡಿಯೋ ಅಪ್ಲೋಡ್!

30 ವರ್ಷದ ಮಹಿಳೆ ಮೇಲೆ ಐದು ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರ ಗೈದು, ತಮ್ಮ ಕುಕೃತ್ಯದ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಜೈಪುರ: 30 ವರ್ಷದ ಮಹಿಳೆ ಮೇಲೆ ಐದು ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರ ಗೈದು, ತಮ್ಮ ಕುಕೃತ್ಯದ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ರಾಜಸ್ತಾನದ ಪಾಲಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಮೇ 26ರಂದು ಮಹಿಳೆ ಆಕೆಯ ಸ್ನೇಹಿತೆಯೊಂದಿಗೆ ದೇಗುಲಕ್ಕೆ ತೆರಳುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಸುತ್ತುವರಿದ ದುಷ್ಕರ್ಮಿಗಳು ಆಕೆಯ ಮೇಲೆರಗಿದ್ದಾರೆ. ಬಳಿಕ ಒಬ್ಬರಾದ ಬಳಿಕ ಒಬ್ಬರಂತೆ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾರೆ. ಅಲ್ಲದೆ ಬಲಾತ್ಕಾರದ ದೃಶ್ಯಾವಳಿಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ನಿನ್ನೆ ಅಂದರೆ ಸೋಮವಾರ ಪೊಲೀಸ್ ಠಾಣೆಗೆ ತೆರಳಿ ಈ ಕುರಿತು ದೂರು ನೀಡಿದ್ದಾಳೆ.
ಸಂತ್ರಸ್ಥ ಮಹಿಳೆಯ ದೂರು ದಾಖಲಿಸಿಕೊಂಡ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ್ದು, ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಪರಿಶೀಲಿಸಿದ್ದಾರೆ. ಅಂತೆಯೇ ವಿಡಿಯೋದಲ್ಲಿರುವ ಐವರು ಕಾಮುಕರ ಪೈಕಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿತೇಂದ್ರ ಭಾಟ್, 20 ವರ್ಷ, ಗೋವಿಂದ ಭಾಟ್, 20 ವರ್ಷ, ದಿನೇಶ್ ಭಾಟ್, 24 ವರ್ಷ ಮತ್ತು ಮಹೇಂದ್ರ ಭಾಟ್, 22 ವರ್ಷ ಎಂದು ಗುರುತಿಸಲಾಗಿದೆ.
ಪ್ರಕರಣದ ಐದನೇ ಆರೋಪಿ ಸಂಜಯ್ ಭಾಟ್ ನಾಪತ್ತೆಯಾಗಿದ್ದು, ಆತನ ಬಂಧನಕ್ಕಾಗಿ ವ್ಯಾಪರ ಬಲೆ ಬೀಸಲಾಗಿದೆ ಎಂದು ಪಾಲಿ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಸಿಂಗ್ ಭಾತಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com