ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಸಮಾರಂಭ ರಾಂಚಿಯಲ್ಲಿ ನಡೆಯಲಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಆಯುಷ್ ಇಲಾಖೆ ದೆಹಲಿ, ಶಿಮ್ಲಾ, ಅಹಮದಾಬಾದ್, ಮೈಸೂರು ಮತ್ತು ರಾಂಚಿ ಈಐದು ನಗರಗಳನ್ನು ತಾತ್ಕಾಲಿಕವಾಗಿ ಗುರುತಿಸಿ ಇದರಲ್ಲಿ ಯಾವುದಾದರೂ ಒಂದು ಸ್ಥಳವನ್ನು ಆಯ್ಕೆ ಮಾಡುವ ಅವಕಾಶವನ್ನು ಪ್ರಧಾನಿ ಕಾರ್ಯಾಲಯಕ್ಕೆ ನೀಡಿತ್ತು.