ನಖ್ವಿ ನಿವಾಸದಲ್ಲಿ ಈದ್ ಉಲ್ ಫಿತರ್ ಆಚರಿಸಿದ ಕೇಂದ್ರ ಸಚಿವರು
ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್ ಸೇರಿದಂತೆ ಹಲವು ಕೇಂದ್ರ ಸಚಿವರು ಕೇಂದ್ರ ಅಲ್ಪ ಸಂಖ್ಯಾತ...

Published On :
ನವದೆಹಲಿ: ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್ ಸೇರಿದಂತೆ ಹಲವು ಕೇಂದ್ರ ಸಚಿವರು ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ನಿವಾಸದಲ್ಲಿ ಬುಧವಾರ ಈದ್ ಉಲ್ ಫಿತರ್ ಅನ್ನು ಅದ್ಧೂರಿಯಾಗಿ ಆಚರಿಸಿದರು.
ಈ ಈದ್ ಎಲ್ಲರಿಗೂ ಸಂತೋಷ, ಉತ್ಸಾಹ ತುಂಬಲಿ. ದೇಶದ ಎಲ್ಲ ಜನತೆಗೂ ಈದ್ ಉಲ್ ಫಿತರ್ ಶುಭಾಶಯಗಳ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇದೇ ವೇಳೆ, ಅಲ್ಪ ಸಂಖ್ಯಾತ ವಿದ್ಯಾರ್ಥಿನಿಯರಿಗೆ ನಾನು ಈದ್ ಗಿಫ್ಟ್ ವೊಂದನ್ನು ನೀಡುತ್ತಿದ್ದು, ಅವರು ಮುಂದಿನ ಐದು ವರ್ಷಗಳ ಕಾಲ 5 ಕೋಟಿ ರುಪಾಯಿ ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಘೋಷಿಸಿದರು.
ಕೇಂದ್ರ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೆ. ನಮ್ಮ ಸರ್ಕಾರ ನಮಗೆ ವೋಟ್ ಹಾಕದವರೂ ಸೇರಿದಂತೆ ಎಲ್ಲರ ಅಭಿವೃದ್ಧಿ ಬಯಸುತ್ತೆ ಎಂದು ನಖ್ವಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


