ಆಂಧ್ರಪ್ರದೇಶ ಸಚಿವ ಸಂಪುಟದಲ್ಲಿ 5 ಉಪಮುಖ್ಯಮಂತ್ರಿಗಳು!
ದೇಶ
ದೇಶದಲ್ಲೇ ಮೊದಲು: ಆಂಧ್ರಪ್ರದೇಶ ಸಚಿವ ಸಂಪುಟದಲ್ಲಿ 5 ಉಪಮುಖ್ಯಮಂತ್ರಿಗಳು!
ಆಂಧ್ರಪ್ರದೇಶದಲ್ಲಿ 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ಎಸ್ ಸಿ, ಎಸ್ ಟಿ, ಬಿಸಿ, ಅಲ್ಪಸಂಖ್ಯಾತ, ಕಾಪು ಸಮುದಾಯದಿಂದ ಒಬ್ಬೊಬ್ಬರನ್ನು ಉಪಮುಖ್ಯಮಂತ್ರಿ ಮಾಡುವ ಮೂಲಕ ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿಧ್ಯ ಸಿಗುವಂತೆ ಮಾಡಲು ಜಗನ್ ಮೋಹನ್ ರೆಡ್ಡಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ತಾಡೇಪಲ್ಲಿಯಲ್ಲಿರುವ ಸಿಎಂ ಕ್ಯಾಂಪ್ ಕಚೇರಿಯಲ್ಲಿ ನಡೆದ ನೂತನ ಶಾಸಕರ ಸಭೆಯಲ್ಲಿ 25 ಸದಸ್ಯರ ಮಂತ್ರಿಮಂಡಲ ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ.
2.5 ವರ್ಷದ ನಂತರ ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿರುವ ಸಿಎಂ ವೈಎಸ್ ಆರ್ ಸಿಪಿ ಸರ್ಕಾರ ಹಾಗೂ ಹಿಂದಿನ ಸರ್ಕಾರದ ನಡುವಿನ ವ್ಯತ್ಯಾಸವನ್ನು ಜನರು ಸ್ಪಷ್ಟವಾಗಿ ಕಾಣುವಂತೆ ಮಾಡಬೇಕೆಂದು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.
ಇತಿಹಾಸದಲ್ಲಿ ಮೊದಲ ಬಾರಿಗೆ 5 ಉಪಮುಖ್ಯಮಂತ್ರಿಗಳನ್ನು ಹೊಂದಿರುವ ಸಂಪುಟ ಆಂಧ್ರಪ್ರದೇಶದ್ದಾಗಿರಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ