ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಂಟನಿ ನಿರಾಸಕ್ತಿ, ಕಾರ್ಯಾಧ್ಯಕ್ಷ ಸ್ಥಾನ ಒಲ್ಲೇ ಎಂದ ವೇಣುಗೋಪಾಲ್

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ವಿಮುಖವಾಗಲು ಪಟ್ಟು ಹಿಡಿದಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು ಹಿರಿಯ ಕಾಂಗ್ರೆಸ್ ಮುಖಂಡ ಎ. ಕೆ. ಆಂಟನಿ ನಿರಾಕರಿಸಿದ್ದಾರೆ.
ಎ. ಕೆ. ಆಂಟನಿ
ಎ. ಕೆ. ಆಂಟನಿ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ  ಎಐಸಿಸಿ ಅಧ್ಯಕ್ಷ ಸ್ಥಾನದಿಂದ ವಿಮುಖವಾಗಲು ಪಟ್ಟು ಹಿಡಿದಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು  ಹಿರಿಯ ಕಾಂಗ್ರೆಸ್ ಮುಖಂಡ ಎ. ಕೆ. ಆಂಟನಿ ನಿರಾಕರಿಸಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಹಾಗೂ ಗಾಂಧಿ ಕುಟುಂಬದ ನಂಬಿಕಸ್ತರು ಆಗಿರುವ ಎ. ಕೆ. ಆಂಟನಿ ಹೇಳಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಇದಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಕೂಡಾ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬದ ಹೊರಗಿನವರನ್ನು ತರಲು ಹಿರಿಯ ಕಾಂಗ್ರೆಸ್ ಮುಖಂಡರಾದ ಅಹ್ಮದ್ ಪಟೇಲ್ ಹಾಗೂ ಗುಲಾಂ ನಬಿ ಅಜಾದ್  ಯೋಚಿಸುತ್ತಿದ್ದಾರೆ.  
ಗಾಂಧಿ ಕುಟುಂಬದ ಬಗ್ಗೆ ಅಪಾರ ಗೌರವಿದೆ. ಆದರೆ, ಎಐಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಿಲ್ಲ ಎಂದು ಎ. ಕೆ. ಆಂಟನಿ ಅಹ್ಮದ್ ಪಟೇಲ್ ಹಾಗೂ ಗುಲಾಂ ನಬಿ ಅಜಾದ್ ಅವರಿಗೆ ತಿಳಿಸಿದ್ದಾರೆ. ಮತ್ತೊಂದೆಡೆ ಎಐಸಿಸಿ  ಕಾರ್ಯಾಧ್ಯಕ್ಷ ಸ್ಥಾನ ನಿರ್ವಹಿಸಲು ಕೆ. ಸಿ. ವೇಣುಗೋಪಾಲ್ ನಿರಾಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದಾಗ್ಯೂ, ಕಾಂಗ್ರೆಸ್ ಕಾರ್ಯಾಕಾರಿ ಸಮಿತಿ, ರಾಹುಲ್ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ್ದು, ಅದೇ ಹುದ್ದೆಯಲ್ಲಿ ಮುಂದುವರೆಯುವಂತೆ ನಿರ್ಧಾರ ತೆಗೆದುಕೊಂಡಿದೆ. ಈಗ ಉತ್ತರ ಭಾರತದಲ್ಲಿ ಪಕ್ಷವನ್ನು ಮುನ್ನಡೆಸುವ ನಾಯಕನತ್ತ ಪಕ್ಷ  ಎದುರು ನೋಡುತ್ತಿದೆ . ಅನೇಕ ಹಿರಿಯ ನಾಯಕರನ್ನು ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com