ನೀತಿ ಆಯೋಗದ ಸಭೆ: ಮನಮೋಹನ್ ಸಿಂಗ್ ಜೊತೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಸಮಾಲೋಚನೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ನಾಲ್ಕು ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು, ನೀತಿ ಆಯೋಗದ ಸಭೆಯಲ್ಲಿ ಮಂಡಿಸಬೇಕಾದ ತಮ್ಮ ರಾಜ್ಯಗಳಿಗೆ ಸಂಬಂಧಿಸಿದ ರೈತರು, ಬಡಕಟ್ಟು ಸಮುದಾಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು
ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ನಾಲ್ಕು ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು,  ನೀತಿ ಆಯೋಗದ ಸಭೆಯಲ್ಲಿ  ಮಂಡಿಸಬೇಕಾದ  ತಮ್ಮ ರಾಜ್ಯಗಳಿಗೆ ಸಂಬಂಧಿಸಿದ ರೈತರು, ಬಡಕಟ್ಟು ಸಮುದಾಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕರ್ನಾಟಕ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಪುದುಚೇರಿಯ ವಿ. ನಾರಾಯಣಸ್ವಾಮಿ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮನಮೋಹನ್ ಸಿಂಗ್ ಜೊತೆಗೆ ಸಭೆ ನಡೆಸಿದರು. ಛತ್ತೀಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ನಂತರ ಸಭೆಗೆ ಸೇರ್ಪಡೆಗೊಂಡರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ತಮ್ಮ ರಾಜ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಪ್ರಸ್ತಾವಿತ ಅಜೆಂಡಾದ ಬಗ್ಗೆ ಚರ್ಚೆ ನಡೆಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.
 ಅಂತರ್ಜಲ ವೃದ್ಧಿ,   ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ಹಾಗೂ ಬುಡಕಟ್ಟು ಜನಾಂಗದವರ ಜೀವನದಲ್ಲಿ ಬದಲಾವಣೆ ಹಾಗೂ ಸಮೃದ್ಧಿ ತರಲು ಅರಣ್ಯ ಕಾಯ್ದೆಯಲ್ಲಿ ತಿದ್ದುಪಡಿ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಬಾಘೇಲ್, ಕುಮಾರಸ್ವಾಮಿ, ಹಾಗೂ ನಾರಾಯಣ ಸ್ವಾಮಿ ಅವರನ್ನು ಪ್ರಧಾನಿ ಮೋದಿ ಪ್ರತ್ಯೇಕವಾಗಿ ಕರೆದಿದ್ದಾರೆ 
ರೈತರಿಗೆ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಪಾಲು ಹಾಗೂ ರೈತರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್  ಆಡಳಿತಾವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ  ಪ್ರಸ್ತಾಪಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com