ದೆಹಲಿಯಲ್ಲಿ ನಡೆದ ನೀತಿ ಆಯೋಗ ಸಭೆ
ದೇಶ
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೀತಿ ಆಯೋಗ ಸಭೆಯಲ್ಲಿ ಸಿಎಂಗಳ ವಿರೋಧ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಕಾರಣ ಫ್ಲಾಗ್ ಶಿಪ್ ಕಾರ್ಯಕ್ರಮಗಳು ಎಂದು ...
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಕಾರಣ ಫ್ಲಾಗ್ ಶಿಪ್ ಕಾರ್ಯಕ್ರಮಗಳು ಎಂದು ಬಿಜೆಪಿ ಹೇಳುತ್ತಿದ್ದರೂ ಕೂಡ ಎನ್ ಡಿಎ ಮೈತ್ರಿಕೂಟ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯದಲ್ಲಿ ಹಣಕಾಸು ಬಿಕ್ಕಟ್ಟು ಉಂಟಾಗಿತ್ತು ಕೇಂದ್ರೀಯ ಪ್ರಾಯೋಜಿತ ಯೋಜನೆಗಳನ್ನು(ಸಿಎಸ್ಇ) ಮುಂದುವರಿಸಬಾರದು ಎಂದು ನೀತಿ ಆಯೋಗ ಮಂಡಳಿ ಸಮಿತಿ ಸಭೆಯಲ್ಲಿ ಭಿನ್ನ ನಿಲುವು ತೋರಿಸಿದ್ದಾರೆ.
ಕೇಂದ್ರದ ಯೋಜನೆಗಳನ್ನು ಭರಿಸಲು ರಾಜ್ಯ ಸರ್ಕಾರಗಳು ಹಿಂದೆ ಶೇಕಡಾ 25ರಷ್ಟನ್ನು ಭರಿಸುತ್ತಿದ್ದರೆ ಪ್ರಸ್ತುತ ಶೇಕಡಾ 40ರಷ್ಟು ವೆಚ್ಚ ಭರಿಸಬೇಕಾಗುತ್ತದೆ. ಯೋಜನಾ ಆಯೋಗಕ್ಕೆ ಬದಲಿಯಾಗಿ ನಿಲ್ಲುವಲ್ಲಿ ನೀತಿ ಆಯೋಗ ವಿಫಲವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಪ್ರತಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೆರವು ನೀಡುವುದು ಕಷ್ಟವಾಗುತ್ತದೆ. ಹೀಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ನಿಲ್ಲಿಸಿ ಕೇಂದ್ರ ವಲಯ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ಕುಮಾರ್ ಆಡಳಿತ ಮಂಡಳಿಗೆ ತಿಳಿಸಿದ್ದಾರೆ.
ದೇಶದ ಅಭಿವೃದ್ಧಿ ಅಜೆಂಡಾದಲ್ಲಿ ಕೇಂದ್ರ ಸರ್ಕಾರ 21ಯೋಜನೆಗಳ ಹಣಕಾಸು ವಿಧಾನವನ್ನು ಬದಲಿಸಿದ್ದು ಕೇಂದ್ರ ಸರ್ಕಾರ ಶೇಕಡಾ 60ರಷ್ಟು ಮತ್ತು ರಾಜ್ಯ ಸರ್ಕಾರ ಶೇಕಡಾ 40ರಷ್ಟು ಕೊಡುಗೆಗಳನ್ನು ನೀಡಲಿದೆ. ಕೆಲವು ಕೇಂದ್ರೀಯ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಶೇಕಡಾ 50ರಷ್ಟು ಭರಿಸುತ್ತದೆ. ಇದು ರಾಜ್ಯ ಸರ್ಕಾರಗಳ ಭಿನ್ನ ನಿಲುವಿಗೆ ಕಾರಣವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ