ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು

'ಮಹಾ' ಸಂಪುಟ ವಿಸ್ತರಣೆ: 'ಕೈ' ಕೊಟ್ಟಿದ್ದ ವಿಖೆ ಪಾಟಿಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ!

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Published on
ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಸಂಪುಟ ವಿಸ್ತರಣೆ ಮಾಡಿದ್ದು, ಈ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಮುಂಬೈ ಭಾರತೀಯ ಜನತಾಪಾರ್ಟಿ ಮುಖ್ಯಸ್ಥ ಆಶೀಸ್ ಶೆಲಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರದಲ್ಲಿ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉಪಸ್ಥಿತರಿದ್ದರು. ಇನ್ನು ಕ್ಯಾಬಿನೆಟ್ ವಿಸ್ತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಾರ್ಯಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ವಸಚಿ ಸಚಿವ ಪ್ರಕಾಶ್ ಮೆಹ್ತಾ ಸೇರಿದಂತೆ 6 ಸಚಿವರು ರಾಜಿನಾಮೆ ನೀಡಿದ್ದಾರೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com