ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದ ಹಿನ್ನಲೆ; ಬಿಜೆಪಿ ಸಂಸದೀಯ ಸಭೆ ರದ್ದು

ಬಿಜೆಪಿ ರಾಜ್ಯಸಭಾ ಸದಸ್ಯ ಹಾಗೂ ಪಕ್ಷದ ರಾಜಸ್ತಾನ ಘಟಕದ ಅಧ್ಯಕ್ಷ ಮದಲ್ ಲಾಲ್ ಸೈನಿ ಅವರ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಬಿಜೆಪಿ ರಾಜ್ಯಸಭಾ ಸದಸ್ಯ ಹಾಗೂ ಪಕ್ಷದ ರಾಜಸ್ತಾನ ಘಟಕದ ಅಧ್ಯಕ್ಷ ಮದಲ್ ಲಾಲ್ ಸೈನಿ ಅವರ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ.
ಶ್ವಾಸಕೋಶದ ಸೋಂಕಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 75 ವರ್ಷ ಪ್ರಾಯದ ಸೈನಿ ನಿನ್ನೆ ನಿಧನರಾಗಿದ್ದರು.
ಈ ಹಿನ್ನಲೆಯಲ್ಲಿ ಎಲ್ಲಾ ಚುನಾಯಿತ ಬಿಜೆಪಿ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಬೇಕಿದ್ದ ಸಂಸದೀಯ ಸಭೆಯನ್ನು ಮುಂದೂಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com