ತರೂರ್, ತಿವಾರಿ ಮನವೊಲಿಕೆ ಯತ್ನ ವಿಫಲ: ರಾಹುಲ್ ರಾಜೀನಾಮೆ ನಿಲುವು ಅಚಲ!

ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರಕ್ಕೆ ರಾಹುಲ್ ಗಾಂಧಿ ಬದ್ಧರಾಗಿದ್ದಾರೆ.
ತರೂರ್, ತಿವಾರಿ ಮನವೊಲಿಕೆ ಯತ್ನ ವಿಫಲ: ರಾಹುಲ್ ರಾಜೀನಾಮೆ ನಿಲುವು ಅಚಲ!
ತರೂರ್, ತಿವಾರಿ ಮನವೊಲಿಕೆ ಯತ್ನ ವಿಫಲ: ರಾಹುಲ್ ರಾಜೀನಾಮೆ ನಿಲುವು ಅಚಲ!
ನವದೆಹಲಿ: ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರಕ್ಕೆ ರಾಹುಲ್ ಗಾಂಧಿ ಬದ್ಧರಾಗಿದ್ದಾರೆ. 
ಪಕ್ಷದ ಅಧ್ಯಕ್ಷ ಹುದ್ದೆ ತ್ಯಜಿಸದಂತೆ ಹಿರಿಯ ನಾಯಕರಾದ ಮನೀಷ್ ತಿವಾರಿ, ಶಶಿ ತರೂರ್ ಮನವೊಲಿಕೆ ಯತ್ನ ವಿಫಲಗೊಂಡಿದ್ದು, ತಮ್ಮ ನಿರ್ಧಾರ ಅಚಲವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಅಧ್ಯಕ್ಷ ಹುದ್ದೆಯಲ್ಲೇ ಮುಂದುವರೆಯುವಂತೆ ತರೂರ್, ತಿವಾರಿ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿದ ಮನವಿಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ್ದಾರೆ. 
ಇದೇ ವೇಳೆ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆಯಾದ ಎನ್ಎಸ್ ಯುಐ ಸಹ ರಾಹುಲ್ ಗಾಂಧಿ ತಮ್ಮ ನಿರ್ಧಾರವನ್ನು ಬದಲಿಸಬೇಕೆಂದು ಪಟ್ಟು ಹಿಡಿದು ರಾಹುಲ್ ಗಾಂಧಿ ನಿವಾಸದೆದುರು ಸಂಘಟನೆಯ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. 
ಲೋಕಸಭಾ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ರಾಹುಲ್ ಗಾಂಧಿ ಮೇ.25 ರಂದು ಘೋಷಿಸಿದ್ದರು. ಆದರೆ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆಯನ್ನು ಅವಿರೋಧವಾಗಿ ತಿರಸ್ಕರಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com