ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ, ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡುವುದಾಗಿ ಘೋಷಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮೆಟ್ರೋ ಮ್ಯಾನ್ ಎಂದೇ ಖ್ಯಾತರಾದ ದೆಹಲಿ ಮೆಟ್ರೋದ ಮಾಜಿ ಮುಖ್ಯಸ್ಥ ಇ.ಶ್ರೀಧರನ್ ಅವರು, ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.