ಜಮ್ಮು ಕಾಶ್ಮೀರದ ಎಸ್ಸಿ, ಎಸ್ಟಿ ಸಮುದಾಯಕ್ಕೆ ಉದ್ಯೋಗ ಮೀಸಲು: 370ನೇ ವಿಧಿ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು

ಜಮ್ಮು ಕಾಶ್ಮೀರದಲ್ಲಿನ ಆರ್ಥಿಕ ದುರ್ಬಲ ವರ್ಗ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಕುರಿತು ಕಾನೂನು ಜಾರಿಗೆ ಕೇಂದ್ರ ಸರ್ಕಾರ....
ಜಮ್ಮು ಕಾಶ್ಮೀರದ ಎಸ್ಸಿ, ಎಸ್ಟಿ ಸಮುದಾಯಕ್ಕೆ ಉದ್ಯೋಗ ಮೀಸಲು: 370ನೇ ವಿಧಿ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು
ಜಮ್ಮು ಕಾಶ್ಮೀರದ ಎಸ್ಸಿ, ಎಸ್ಟಿ ಸಮುದಾಯಕ್ಕೆ ಉದ್ಯೋಗ ಮೀಸಲು: 370ನೇ ವಿಧಿ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಆರ್ಥಿಕ ದುರ್ಬಲ ವರ್ಗ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗೆ  ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಕುರಿತು ಕಾನೂನು ಜಾರಿಗೆ ಕೇಂದ್ರ ಸರ್ಕಾರ ಅನುಮತಿಸಿದೆ.
ಪ್ರಧಾನಿ ಮೋದಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನೊಳಗೊಂಡ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಲಲಾಗಿದೆ. 
ಸಭೆ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಜೇಟ್ಲಿ "ಸಂವಿಧಾನದ (77ನೇ ತಿದ್ದುಪಡಿ)1995 ರ ಕಾಯ್ದೆ, ಸಂವಿಧಾನದ (103ನೇ ತಿದ್ದುಪಡಿ) 2019 ಕಾಯ್ದೆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತ ಸಂವಿಧಾನದ ಸಂಬಂಧಿತ ನಿಬಂಧನೆಗಳನ್ನು ಅನ್ವಯಿಸುವ ಉದ್ದೇಶದಿಂದ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಕಲ್ಪಿಸುವ 370ನೇ ವಿಧಿಯಪರಿಚ್ಛೇದ (1)ರ ಅಡಿಯಲ್ಲಿ 2019 ರ ತಿದ್ದುಪಡಿ ಆದೇಶ,ದ ಅನುಸಾರ ಮೀಸಲಾತಿ ನಿಯಮಾವಳಿಗಳನ್ನು ಅಳವಡಿಸಿಕೊಳ್ಲಲಾಗುತ್ತಿದೆ" ಎಂದರು.
ಇನ್ನು ಈ ಆದೇಶದ ಪ್ರತಿಗೆ ರಾಷ್ಟ್ರಪತಿ ಅಂಕಿತ ಹಾಕುವ ಮೂಲಕ ಅಧಿಕೃತ ಕಾನೂನು ಜಾರಿಯಾಗಿಸಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com