ಸಂಗ್ರಹ ಚಿತ್ರ
ದೇಶ
ಗಡಿಯಲ್ಲಿ ಬಾಲ ಬಿಚ್ಚಿದ 2 ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!
ಪಾಕ್ ನೆಲದಲ್ಲಿ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ತೀವ್ರ ಹತಾಶೆಗೊಂಡಿರುವ ಉಗ್ರರು ಗಡಿಯಲ್ಲಿ ಭಯೋತ್ಪಾದಕ...
ನವದೆಹಲಿ: ಪಾಕ್ ನೆಲದಲ್ಲಿ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ತೀವ್ರ ಹತಾಶೆಗೊಂಡಿರುವ ಉಗ್ರರು ಗಡಿಯಲ್ಲಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದು ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ನಡೆಸಿದ ಭಾರತೀಯ ಯೋಧರ ಗುಂಡೇಟಿಗೆ ಇಬ್ಬರು ಉಗ್ರರು ಮಟಾಶ್ ಆಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರ ವಿರುದ್ಧ ಭಾರತೀಯ ಯೋಧರು ಆಪರೇಷನ್ ಆಲೌಟ್ ಕಾರ್ಯಾಚರಣೆ ಕೈಗೊಂಡಿದ್ದು ಉಗ್ರರನ್ನು ಹುಡುಕಿ ಹುಡುಕಿ ಹೊಡೆದು ಹಾಕುತ್ತಿದ್ದಾರೆ.
ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಭಾರತೀಯ ಯೋಧರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ