'ನಿಜವಾದ ಭಾರತ ರತ್ನ'; ಐಎಎಫ್ ಪೈಲಟ್ ಅಭಿನಂದನ್ ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರ

ಭಾರತದ ವಾಯುಗಡಿ ದಾಟಿ ಒಳನುಸುಳಿದ್ದ ಪಾಕಿಸ್ತಾನದ ಎಫ್-16ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪ್ರಾಣದ ಹಂಗು ತೊರೆದು ಹೋರಾಡಿ ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವಾಯುಸೇನೆ ಪೈಲಟ್ ಅಭಿನಂದನ್ ಅವರ ಬಿಡುಗಡೆಯಾಗುತ್ತಿದ್ದಂತೆಯೇ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ತವರಿಗೆ ಮರಳಿದ ಅಭಿನಂದನ್
ತವರಿಗೆ ಮರಳಿದ ಅಭಿನಂದನ್
ನವದೆಹಲಿ: ಭಾರತದ ವಾಯುಗಡಿ ದಾಟಿ ಒಳನುಸುಳಿದ್ದ ಪಾಕಿಸ್ತಾನದ ಎಫ್-16ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪ್ರಾಣದ ಹಂಗು ತೊರೆದು ಹೋರಾಡಿ ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವಾಯುಸೇನೆ ಪೈಲಟ್ ಅಭಿನಂದನ್ ಅವರ ಬಿಡುಗಡೆಯಾಗುತ್ತಿದ್ದಂತೆಯೇ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಪ್ರಮುಖವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಗಣ್ಯರು ಅಭಿನಂದನ್ ಗೆ ಭಾವನಾತ್ಮಕ ಸ್ವಾಗತ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಿಮ್ಮ ಧೈರ್ಯ ಮತ್ತು ಸಾಹಸದಿಂದ ಇಡೀ ದೇಶ ಹೆಮ್ಮೆಯಿಂದ ಬೀಗುವಂತೆ ಮಾಡಿದ್ದೀರಿ. ನಿಜಕ್ಕೂ ನಮ್ಮ ಸೇನೆ ದೇಶದ 130 ಕೋಟಿ ಪ್ರಜೆಗಳಿಗೂ ಸ್ಪೂರ್ತಿಯಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಅಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಕೂಡ ಟ್ವೀಟ್ ಮೂಲಕ ಅಭಿನಂದನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು,  ನೀವು ನಮ್ಮನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ, ನಿಮ್ಮನ್ನು ನಾವು ಪ್ರೀತಿಯಿಂದ ಸ್ವಾಗತಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com