ಸಾಂದರ್ಭಿಕ ಚಿತ್ರ
ದೇಶ
ಹೈದರಾಬಾದ್: ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ 12ನೇ ತರಗತಿ ವಿದ್ಯಾರ್ಥಿ ಸಾವು
ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಶನಿವಾರ ಹೈದರಾಬಾದ್ ನಲ್ಲಿ ನಡೆದಿದೆ.
ಹೈದರಾಬಾದ್: ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ ವೇಳೆ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಶನಿವಾರ ಹೈದರಾಬಾದ್ ನಲ್ಲಿ ನಡೆದಿದೆ.
ಸಿಕಿಂದರಾಬಾದ್ ನ ಶ್ರೀ ಚೈತನ್ಯ ಕಾಲೇಜ್ ನಲ್ಲಿ ಪರೀಕ್ಷೆ ಬರೆಯುತ್ತಿದ್ದ ಗೋಪಿ ರಾಜು(12) ಎಂಬ ವಿದ್ಯಾರ್ಥಿ ದಿಢೀರ್ ಕುಸಿದುಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಿಂದ ಸಹ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಘಾತಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೋಪಿ ರಾಜು, ಯಲ್ಲಾರೆಡ್ಡಿಗುಡ್ಡ ಪ್ರದೇಶದ ಸರ್ಕಾರಿ ಕಾಲೇಜ್ ವಿದ್ಯಾರ್ಥಿಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ