
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಮಾರ್ಚ್ 19ರವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ದೆಹಲಿ ಹೈಕೋರ್ಟ್ ಇಂದು ಆದೇಶ ನೀಡಿದೆ.
ರಾಬರ್ಟ್ ವಾದ್ರಾ ಅವರ ಆಪ್ತ ಮನೋಜ್ ಅರೊರಾ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಪಾಟಿಯಾಲ ಹೌಸ್ ನ್ಯಾಯಾಲಯ ಮುಂದೂಡಿದೆ.ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 19ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಲಂಡನ್ ನಲ್ಲಿ ಆಸ್ತಿ ಖರೀದಿಗೆ ಸಂಬಂಧಿಸಿದ ವಿಚಾರಣೆಗಾಗಿ ಬುಧವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮಂದೆ ರಾಬರ್ಟ್ ವಾದ್ರಾ ಹಾಜರಾಗಿದ್ದರು. ನಂತರ ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಲಾಗಿದೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸದಂತೆ ಕೋರಿ ವಾದ್ರಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಫೆಬ್ರವರಿ 25 ರಂದು ವಜಾಗೊಳಿಸಿತ್ತು.
Advertisement