ಕುಂಭ ಮೇಳ ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶ ಜನತೆಗೆ ಮೋದಿ ಅಭಿನಂದನೆ

2019ರ ಕುಂಭಮೇಳವನ್ನು ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ....
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ನವದೆಹಲಿ: 2019ರ ಕುಂಭಮೇಳವನ್ನು  ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಜನತೆ ಅದರಲ್ಲೂ ಪ್ರಯಾಗ್ ರಾಜ್ ನ ಜನತೆ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಅಡಿಯಲ್ಲಿ ಇಡೀ ಕಾರ್ಯಕ್ರಮ ಸುಸೂತ್ರವಾಗಿ ನಡೆದಿದೆ ಎಂದು ಪ್ರದಾನಿ  ಮೋದಿ ಮೆಚ್ಚುಗೆ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದಾರೆ.
ಕುಂಭ ಮೇಳ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ, ನಮ್ಮ ಆದ್ಯಾತ್ಮಿಕ ನೆಲೆಯಲ್ಲಿ ನಡೆದ ಈ ಕುಂಭಮೇಳ ಮುಂದಿನ ಹಲವು ವರ್ಷಗಳ ವರೆಗೂ ನೆನಪಿನಲ್ಲಿರುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com