ರಾಜಸ್ಥಾನದಲ್ಲಿ ಮಿಗ್-21 ಯುದ್ಧ ವಿಮಾನ ಪತನ, ಪೈಲಟ್ ಪಾರು

ರಾಜಸ್ಥಾನದ ಬಿಕಾನೇರ್ ದಲ್ಲಿ ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಶುಕ್ರವಾರ ಪತನವಾಗಿದ್ದು, ಪೈಲಟ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬಿಕಾನೇರ್: ರಾಜಸ್ಥಾನದ ಬಿಕಾನೇರ್ ದಲ್ಲಿ ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಶುಕ್ರವಾರ ಪತನವಾಗಿದ್ದು, ಪೈಲಟ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಯುದ್ಧ ವಿಮಾನ ಪತನಕ್ಕೆ ತಾಂತ್ರಿಕ ದೋಷ ಕಾರಣ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ಪೈಲಟ್ ಪ್ಯಾರಾಚ್ಯೂಟ್ ಸಹಾಯದಿಂದ ಸುರಕ್ಷಿತವಾಗಿ ಇಳಿದು ಬಂದಿದ್ದಾರೆ.
ಈ ದುರ್ಘಟನೆ ಕುರಿತು ಕೋರ್ಟ್ ತನಿಖೆಗೆ ಆದೇಶಿಸಲಾಗಿದೆ.
ಕಳೆದ ಫೆಬ್ರವರಿ 27ರಂದು ಜಮ್ಮು ಮತ್ತು ಕಾಶ್ಮೀರದ ಬಡಗಾಂ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಮಿಗ್-21 ಯುದ್ಧ ವಿಮಾನ ಪತನಗೊಂಡು, ಇಬ್ಬರು ಪೈಲಟ್ ಗಳು ಮೃತಪಟ್ಟಿದ್ದರು. ಇದೀಗ ಮತ್ತೊಂದು ಯುದ್ಧ ವಿಮಾನ ಪತನಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com