ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರ್ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಕುಮ್ಮಮಾನಂ ತಿರುವನಂತಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನ ಶಶಿ ತರೂರು ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಕುಮ್ಮನಂ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.
ಅಸ್ಸಾಂ ರಾಜ್ಯಪಾಲ ಜಗದೀಶ್ ಮುಖಿ ಮುಂದಿನ ರಾಜ್ಯಪಾಲರ ನೇಮಕವಾಗುವವರೆಗೆ ಮಿಜೋರಾಂ ರಾಜ್ಯಪಾಲರಾಗಿ ಹೆಚ್ಚುವರಿ ಹೊಣೆ ವಹಿಸಲಿದ್ದಾರೆ.