ನರೇಂದ್ರ ಮೋದಿ
ದೇಶ
ಕಾಶ್ಮೀರಿಗಳ ಮೇಲೆ ಹಲ್ಲೆ ನಡೆದರೆ ಕಠಿಣ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಪ್ರಧಾನಿ ಮೋದಿ ಮನವಿ
ಪುಲ್ವಾಮಾ ಉಗ್ರ ದಾಳಿಯ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು....
ಲಖನೌ: ಪುಲ್ವಾಮಾ ಉಗ್ರ ದಾಳಿಯ ನಂತರ ದೇಶದ ವಿವಿಧೆಡೆ ನಡೆಯುತ್ತಿದ್ದ ಕಾಶ್ಮೀರಿಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದು, ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಇಂದು ಕಾನ್ಪುರದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇತ್ತೀಚಿಗೆ ಲಖನೌದಲ್ಲಿ ಕಾಶ್ಮೀರಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದವರು ವಿಚಿತ್ರ ಜನರು. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕ ಎಂದರು.
ದೇಶದಲ್ಲಿ ಏಕತೆಯ ವಾತಾವರಣವನ್ನು ಕಾಪಾಡುವುದು ಬಹಳ ಮುಖ್ಯ. ಹೀಗಾಗಿ ದೇಶದಲ್ಲಿ ಕಾಶ್ಮೀರಿಗಳ ಮೇಲೆ ಈ ರೀತಿಯ ಹಲ್ಲೆ, ಹಿಂಸೆ, ದಬ್ಟಾಳಿಕೆ ನಡೆದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ನಾನು ಇತರೆ ರಾಜ್ಯಗಳಿಗೂ ಮನವಿ ಮಾಡುತ್ತೇನೆ ಎಂದರು.
ಇದೇ ವೇಳೆ ಲಖನೌ ಪ್ರಕರಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತತ್‌ಕ್ಷಣ ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ ಎಂದು ಮೋದಿ ಪ್ರಶಂಸಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ