ಜವಾಹರ್ ಚವ್ಡಾ ಅವರು ಸ್ಪೀಕರ್ ಗೆ ರಾಜೀನಾಮೆ ನೀಡುತ್ತಿರುವುದು
ದೇಶ
ಶಾಸಕ ಸ್ಥಾನಕ್ಕೆ ಗುಜರಾತ್ ಹಿರಿಯ ಕಾಂಗ್ರೆಸ್ ನಾಯಕ ಜವಾಹರ್ ರಾಜೀನಾಮೆ
ಗುಜರಾತ್ ನಲ್ಲಿ ಮತ್ತೊಂದು ಕಾಂಗ್ರೆಸ್ ವಿಕೆಟ್ ಪತನವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಜವಾಹರ್ ಚವ್ಡಾ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ....
ಅಹಮದಾಬಾದ್: ಗುಜರಾತ್ ನಲ್ಲಿ ಮತ್ತೊಂದು ಕಾಂಗ್ರೆಸ್ ವಿಕೆಟ್ ಪತನವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಜವಾಹರ್ ಚವ್ಡಾ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಕಳೆದ ಕೆಲವು ತಿಂಗಳಲ್ಲಿ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದಂತಾಗಿದೆ.
ಗುಜರಾತ್ ನಲ್ಲಿ ಮಾರ್ಚ್ 12ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿಗದಿಯಾಗಿದ್ದು, ಮಹತ್ವದ ಸಭೆಗೂ ಮುನ್ನವೇ ಚವ್ಡಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮನವದರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಚವ್ಡಾ ಅವರು ಇಂದು ಗುಜರಾತ್ ವಿಧಾನಸಭೆ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಚವ್ಡಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತ್ರಿವೇದಿ ಅವರು ಹೇಳಿದ್ದಾರೆ.
ಕಳೆದ ಜುಲೈನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಕುನ್ವರ್ಜಿ ಬವಲಿಯಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
ಕಳೆದ ತಿಂಗಳು ಮೊದಲ ಬಾರಿಗೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಆಶಾ ಪಟೇಲ್ ಅವರು ಸಹ ರಾಜೀನಾಮೆ ನೀಡಿ, ಆಡಳಿತರೂಢ ಬಿಜೆಪಿ ಸೇರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ