ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ!

ಜಮ್ಮು ಬಸ್ ನಿಲ್ಜಾಣದಲ್ಲಿ ನಿನ್ನೆ ಶಂಕಿತ ಉಗ್ರರು ಎಸೆದಿದ್ದ ಗ್ರೆನೇಡ್ ಗಳು ಸ್ಠೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಬಂಧಿತ ಶಂಕಿತ ಉಗ್ರ ಯಾಸಿನ್
ಬಂಧಿತ ಶಂಕಿತ ಉಗ್ರ ಯಾಸಿನ್
ಶ್ರೀನಗರ: ಜಮ್ಮು ಬಸ್ ನಿಲ್ಜಾಣದಲ್ಲಿ ನಿನ್ನೆ ಶಂಕಿತ ಉಗ್ರರು ಎಸೆದಿದ್ದ ಗ್ರೆನೇಡ್ ಗಳು ಸ್ಠೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ನಿನ್ನೆ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಇಂದು ಆಸ್ಪತ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆ ಮೂಲಕ ಜಮ್ಮು ಬಸ್ ನಿಲ್ದಾಣದ ಗ್ರೆನೇಡ್ ಸ್ಫೋಟ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. 
ಜನದಟ್ಟಣೆಯ ಬಸ್ ನಿಲ್ದಾಣದಲ್ಲಿ ಶಂಕಿತ ಉಗ್ರ ನಡೆಸಿದ ಗ್ರೆನೇಡ್ ಸ್ಪೋಟದಿಂದಾಗಿ ನಿನ್ನೆ 17 ವರ್ಷದ ಯುವಕ ಮೃತಪಟ್ಟು, 32 ಜನರು ಗಾಯಗೊಂಡಿದ್ದರು. ಅಂತೆಯೇ ಮೂವರ ಪರಿಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಜಮ್ಮು ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ, ಗ್ರೆನೇಡ್ ಎಸೆದ ಕೆಲ ಗಂಟೆಗಳಲ್ಲೇ ಉಗ್ರ ಅರೆಸ್ಟ್
ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟಿಸಿದ್ದ ಉಗ್ರನನ್ನು ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾಸಿನ್ ಭಟ್ ಬಂಧಿತ ಉಗ್ರ. ಈತ ನಿಷೇಧಿತ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದನಾ ಸಂಘಟನೆಗೆ ಸೇರಿದವನಾಗಿದ್ದಾನೆ. ಘಟನೆ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಐಜಿಪಿ ಮನೀಷ್ ಕೆ ಸಿನ್ಹಾ ಮಾಹಿತಿ ನೀಡಿದ್ದಾರೆ. ಕುಲ್ವಾಮ್ ಜಿಲ್ಲೆಯ ಹಿಜ್ಬುಲ್‍ಮುಜಾಹಿದೀನ್ ಜಿಲ್ಲಾ ಕಮಾಂಡರ್ ಫರೂಕ್ ಅಹ್ಮದ್ ಭಟ್ ಅಲಿಯಾಸ್ ಓಮರ್, ಯಾಸಿರ್ ಭಟ್‍ಗೆ ಗ್ರೆನೇಡ್ ದಾಳಿ ನಡೆಸಿಲು ಸೂಚನೆ ನೀಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟವನನ್ನು 17 ವರ್ಷದ ಮೊಹಮ್ಮದ್ ಶರೀಕ್ ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com