ಅಹಂಕಾರದಿಂದ ವರ್ತಿಸುತ್ತಿರುವ ಕಾಂಗ್ರೆಸ್ ನ ಎಲ್ಲಾ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಗೆ ಮನವಿ ಮಾಡಿದ್ದೆವು ಆದರೆ ಕಾಂಗ್ರೆಸ್ ಅಹಂಕಾರದಿಂದ ವರ್ತಿಸಿದೆ. ದೆಹಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆಮ್ ಆದ್ಮಿ ಪಕ್ಷದ ನಡುವೆ ಮತ ವಿಭಜನತೆಯಾಗದಂತೆ ಎಚ್ಚರವಹಿಸಿ ಎಂದು ಜನತೆಗೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಸಾಮರ್ಥ್ಯ ಇರುವುದು ಆಮ್ ಅದ್ಮಿ ಪಕ್ಷಕ್ಕೆ ಮಾತ್ರ. ಆದ್ದರಿಂದ ಆಮ್ ಆದ್ಮಿ ಪಕ್ಷಕ್ಕೇ ಮತ ನೀಡಿ ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.