ಕುತೂಹಲಕ್ಕೆ ತೆರೆ; ಇಂದು ಸಂಜೆ 5 ಗಂಟೆಗೆ ಚು.ಆಯೋಗದಿಂದ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ

ಬಹು ನಿರೀಕ್ಷಿತ ಲೋಕಸಭಾ ಕ್ಷೇತ್ರಗಳ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಭಾನುವಾರ ಪ್ರಕಟಿಸುವ ಸಾಧ್ಯತೆಯಿದೆ. ಏಪ್ರಿಲ್ ಕೊನೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಏಳರಿಂದ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ:ಬಹು ನಿರೀಕ್ಷಿತ ಲೋಕಸಭಾ ಕ್ಷೇತ್ರಗಳ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಭಾನುವಾರ ಪ್ರಕಟಿಸುವ ಸಾಧ್ಯತೆಯಿದೆ. ಏಪ್ರಿಲ್ ಕೊನೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಏಳರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಇಂದು ಸಂಜೆ 5 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ. ಈಗಿರುವ ಲೋಕಸಭೆ ಅವಧಿ ಜೂನ್ 3ರಂದು ಕೊನೆಗೊಳ್ಳಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳಿಗೆ ಈ ಚುನಾವಣೆ ಮಹತ್ವದ್ದಾಗಿದ್ದು ಈಗಾಗಲೇ ಪ್ರಚಾರದಲ್ಲಿ ತೊಡಗಿವೆ. ಇಂದು ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.
ಲೋಕಸಭೆ ಚುನಾವಣೆ ಜೊತೆಗೆ ಚುನಾವಣಾ ಆಯೋಗ ಆಂಧ್ರ ಪ್ರದೇಶ, ಒಡಿಶಾ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಿಧಾನಸಭಾ ಕ್ಷೇತ್ರಗಳಿಗೆ ಸಹ ಅವಧಿಗೆ ಮುನ್ನ ಚುನಾವಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಯಾಗಿರುವುದರಿಂದ 6 ತಿಂಗಳೊಳಗೆ ಅಂದರೆ ಮೇ ತಿಂಗಳೊಳಗೆ ಹೊಸದಾಗಿ ಚುನಾವಣೆ ನಡೆಸಬೇಕು. ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಜಮ್ಮು-ಕಾಶ್ಮೀರ ಎಲೆಕ್ಷನ್ ನಡೆಸಲು ಭಾರತ-ಪಾಕಿಸ್ತಾನ ಗಡಿಭಾಗದಲ್ಲಿ ಉದ್ವಿಗ್ನ ವಾತಾವರಣ ಸದ್ಯಕ್ಕೆ ಇರುವುದು ಕೂಡ ಚುನಾವಣಾ ಆಯೋಗಕ್ಕೆ ತೊಂದರೆಯಾಗಿದೆ.
ಜಮ್ಮು-ಕಾಶ್ಮೀರ ವಿಧಾನಸಭೆಯ ಅವಧಿ 2021ಕ್ಕೆ ಕೊನೆಯಾಗಬೇಕಿತ್ತು. ಆದರೆ ಆಡಳಿತಾರೂಢ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮತ್ತು ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಮಧ್ಯೆ ಭಿನ್ನಾಭಿಪ್ರಾಯ ಬಂದು ದೂರವಾದ್ದರಿಂದ ಬಹುಮತಗಳಿಲ್ಲದೆ ಸರ್ಕಾರ ವಿಸರ್ಜನೆಯಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com