ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!

ಚುನಾವಣಾ ಪ್ರಚಾರದ ಸಂದರ್ಭಗಳಲ್ಲಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.
ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!
ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!
Updated on: 
ನವದೆಹಲಿ: ಚುನಾವಣಾ ಪ್ರಚಾರದ ಸಂದರ್ಭಗಳಲ್ಲಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. 
ಪ್ರಚಾರದ ಸಂದರ್ಭಗಳಲ್ಲಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸುವುದೂ ಸಹ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ, ಮಾ.12 ರಂದು ಎಲ್ಲಾ ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಯಲಿದ್ದು, ಈ ಸಭೆಯ ನಂತರ ಸ್ಪಷ್ಟ ಸೂಚನೆಗಳನ್ನು ನೀಡಲಾಗುವುದು ಎಂದು ಚುನಾವಣಾ ಅಧಿಕಾರಿ ತೀಕಾ ರಾಮ್ ಮೀನಾ ಹೇಳಿದ್ದಾರೆ. 
ಧರ್ಮ ಹಾಗೂ ಜಾತಿಯನ್ನು ಆಧಾರವಾಗಿಟ್ಟುಕೊಂಡು ಚುನಾವಣಾ ಪ್ರಚಾರ ಮಾಡುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಈಗ ಶಬರಿಮಲೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಟೀಕಿಸುವುದಕ್ಕೆ ಅವಕಾಶವಿಲ್ಲ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com