'ಮಸೂದ್ ಅಝರ್ ಜೀ' ಎಂದ ರಾಹುಲ್ , ಬಿಜೆಪಿ ಕೈಗೆ ಸಿಕ್ಕ ಹೊಸ ಆಸ್ತ್ರ

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೈಷ್ - ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿರುವಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಕೈಗೆ ಹೊಸ ಆಸ್ತ್ರ ಸಿಕ್ಕಂತಾಗಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೈಷ್ - ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್  ಜೀ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿರುವಂತೆ  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಕೈಗೆ ಹೊಸ ಆಸ್ತ್ರ ಸಿಕ್ಕಂತಾಗಿದೆ.

ರಾಹುಲ್ ಗಾಂಧಿ ಅವರ ಹೇಳಿಕೆ ಟಿವಿ ಚಾನೆಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ  ಟಿವಿ ಚಾನೆಲ್ ವೊಂದಕ್ಕೆ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇದನ್ನು ಹೇಳಲು ನಾಚಿಕೆಯಾಗಲಿಲ್ಲವೇ ಎಂದಿದ್ದಾರೆ.

ಬಿಜೆಪಿ ಅಧಿಕೃತ ಟ್ವೀಟರ್ ಖಾತೆಯಲ್ಲಿ ರಾಹುಲ್ ಗಾಂಧಿ ವಿಡಿಯೋವನ್ನು ಹಾಕಲಾಗಿದ್ದು, ಪುಲ್ವಾಮಾ ದಾಳಿಯಲ್ಲಿ 44 ಸಿಆರ್ ಪಿಎಫ್ ಯೋಧರನ್ನು ಹತ್ಯೆಗೈದ ಜಿಇಎಂ ಮುಖ್ಯಸ್ಥರ ಮಸೂದ್ ಅಝರ್ ನಿಗೆ ರಾಹುಲ್ ಗಾಂಧಿ ಅತ್ಯಂತ ಗೌರವ ನೀಡಿರುವುದು ವಿಡಿಯೋದಲ್ಲಿ ಇದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ,  ಪುಲ್ವಾಮಾ ದಾಳಿಯಲ್ಲಿ  40 ಸಿಆರ್ ಪಿಎಫ್ ಯೋಧರ ಹತ್ಯೆ ಹೊಣೆ ಹೊತ್ತುಕೊಂಡಿದ್ದ ಜಿಇಎಂ ಮುಖ್ಯಸ್ಥ ಮಸೂದ್ ಅಝರ್ ನನ್ನು ಎನ್ ಡಿಎ ಸರ್ಕಾರದ ಸಂದರ್ಭದಲ್ಲಿ ಪ್ರಸ್ತುತ ರಾಷ್ಟ್ರೀಯ ರಕ್ಷಣಾ ಸಲಹೆಗಾರರಾಗಿರುವ ಅಜಿತ್ ಧೋವಲ್ ಅವರೇ ಕಂದಹಾರ್ ನಲ್ಲಿ ಬಿಟ್ಟು ಬಂದಿದ್ದರು ಎಂದು  ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com