ಪ್ರಜಾಪ್ರಭುತ್ವದ ರಕ್ಷಣೆ, ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಸ್ಪರ್ಧೆ: ಪ್ರಿಯಾ ದತ್

ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಕಾಂಗ್ರೆಸ್ ಮುಖಂಡೆ ಪ್ರಿಯಾ ದತ್ ಹೇಳಿದ್ದಾರೆ.
ಪ್ರಿಯಾ ದತ್
ಪ್ರಿಯಾ ದತ್

ಮುಂಬೈ:  ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಕಾಂಗ್ರೆಸ್ ಮುಖಂಡೆ ಪ್ರಿಯಾ ದತ್ ಹೇಳಿದ್ದಾರೆ.

ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹೋರಾಡಬೇಕಾಗಿದೆ. ಅಲ್ಲದೇ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಲು ಸಹ ಹೋರಾಟ ಮಾಡಬೇಕಾಗಿದೆ ಎಂದು ಪ್ರಿಯಾ ದತ್  ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ದೇಶವನ್ನು ಪ್ರಗತಿ ಪಥದಲ್ಲಿ ಮುಂದುವರೆಸಲು ಬಯಸುವವರೆಲ್ಲರೂ ಒಗ್ಗೂಡಬೇಕಾಗಿದೆ. ಈ ನಿಟ್ಟಿನಲ್ಲಿ ತಾವೂ ಒಬ್ಬರಾಗಿದ್ದು, ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

2005ರಲ್ಲಿ ಮುಂಬೈಯ ನಾರ್ಥ್ ಸೆಂಟ್ರಲ್ ಕ್ಷೇತ್ರದಿಂದ ಪ್ರಿಯಾ ದತ್ ರಾಜಕೀಯ ಪ್ರವೇಶಿಸಿದ್ದರು. ಮೂರು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಪ್ರಿಯಾದತ್ 2014 ರ ಲೋಕಸಭಾ  ಚುನಾವಣೆಯಲ್ಲಿ ಸೋತಿದ್ದರು.  ಆಕೆಯ ತಂದೆ ಸುನೀಲ್ ದತ್ ಸಾವಿನ ಬಳಿಕ ಎರಡು ಬಾರಿ ಗೆದ್ದಿದ್ದ ಪ್ರಿಯಾ ದತ್ 2014ರಲ್ಲಿ ಬಿಜೆಪಿಯ ಪೂನಾಂ ಮಹಾಜನ್ ಎದುರು ಸೋಲನ್ನುಭವಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜನವರಿಯಲ್ಲಿ ರಾಹುಲ್ ಗಾಂಧಿಗೆ ಪ್ರಿಯಾದತ್ ಪತ್ರ ಬರೆದಿದ್ದರು. ಆದಾಗ್ಯೂ, ಈ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರೇ  ಪ್ರಿಯಾದತ್ ಅವರಿಗೆ ಹೇಳಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com