ಗೋವಾ: ಬಿಜೆಪಿ ಶಾಸಕ ನಿಧನದ ನಂತರ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಕಾಂಗ್ರೆಸ್

ಗೋವಾದಲ್ಲಿ ಹೊಸ ಸರ್ಕಾರ ರಚಿಸುವ ಯತ್ನಿ ಮುಂದುವರೆಸಿರುವ ಕಾಂಗ್ರೆಸ್, ಬಿಜೆಪಿ ಶಾಸಕ ಫ್ರಾನ್ಸಿಸ್‌ ಡಿಸೋಜಾ ನಿಧನದ ನಂತರ ಶನಿವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಪಣಜಿ: ಗೋವಾದಲ್ಲಿ ಹೊಸ ಸರ್ಕಾರ ರಚಿಸುವ ಯತ್ನಿ ಮುಂದುವರೆಸಿರುವ ಕಾಂಗ್ರೆಸ್, ಬಿಜೆಪಿ ಶಾಸಕ ಫ್ರಾನ್ಸಿಸ್‌ ಡಿಸೋಜಾ ನಿಧನದ ನಂತರ ಶನಿವಾರ ಸರ್ಕಾರದ ರಚನೆಯ ಹಕ್ಕು ಮಂಡಿಸಿದೆ.
ಡಿಸೋಜಾ ನಿಧನದ ನಂತರ ಮನೋಹರ್ ಪರಿಕ್ಕರ್ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡಿದ್ದು, ತಮಗೆ ಸರ್ಕಾರ ರಚನೆಗೆ ಅವಕಾಶ ಕೊಡಬೇಕು ಎಂದು ಕೋರಿ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಪ್ರತಿಪಕ್ಷ ನಾಯಕ ಚಂದ್ರಕಾಂತ್ ಕವ್ಲೆಕರ್ ಅವರು ಮನವಿ ಮಾಡಿದ್ದಾರೆ.
ಡಿಸೋಜಾ ನಿಧನ ಮತ್ತು ಇಬ್ಬರು ಶಾಸಕರ ರಾಜೀನಾಮೆ ನಂತರ ಗೋವಾ ವಿಧಾನಸಭೆಯ ಸಂಖ್ಯಾಬಲ 40ರಿಂದ 37ಕ್ಕೆ ಕುಸಿದಿದ್ದು, ಬಹುಮತ ಕಳೆದುಕೊಂಡ ಬಿಜೆಪಿ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ರಾಜ್ಯಪಾಲರಿಗೆ ಒತ್ತಾಯಿಸಿದೆ.
ಕಾಂಗ್ರೆಸ್ ನ ಸುಭಾಶ್ ಶಿರೋಡ್ಕರ್ ಮತ್ತು ದಯಾನಂದ್ ಸೊಪ್ಟೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಕಾಂಗ್ರೆಸ್ ಶಾಸಕರ ಸಂಖ್ಯೆ 14ಕ್ಕೆ ಕುಸಿದಿದೆ. ಆದರೂ ನಮ್ಮದು ರಾಜ್ಯದಲ್ಲಿ ಅತಿ ದೊಡ್ಡ ಪಕ್ಷ. ಆದರೆ ಬಿಜೆಪಿ ಹಿಂಬಾಗಿಲ ಮೂಲಕ ಸರ್ಕಾರ ರಚಿಸಿದೆ. ನಮಗೆ ಬಹುಮತ ಇದೆ. ಅದನ್ನು ನಾವು ಪ್ರೂವ್‌ ಮಾಡುತ್ತೇವೆ ಎಂದು ಕಾಂಗ್ರೆಸ್‌ ತಿಳಿಸಿದೆ. 
ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಡಿಸೋಜಾ ಅವರು ಫೆಬ್ರವರಿ 15ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com