ನವದೆಹಲಿ: ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಮಾ.17 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಆಂಧ್ರಪ್ರದೇಶದ 175 ಸ್ಥಾನಗಳ ಪೈಕಿ 123 ಸ್ಥಾನಗಳಿಗೆ ಹಾಗೂ ಅರುಣಾಚಲ ಪ್ರದೇಶದ 60 ಸ್ಥಾನಗಳ ಪೈಕಿ 54 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಎರಡೂ ರಾಜ್ಯಗಳಿಗೆ ಲೋಕಸಭಾ ಚುನಾವಣೆ ಜೊತೆಯಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದೆ.
ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ಮುಕ್ತೋ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ.