ಶೀಲಾ ದೀಕ್ಷಿತ್ ವಿರೋಧದ ನಡುವೆಯೂ ಆಪ್ ಜತೆ ಮೈತ್ರಿಗೆ ಮುಂದಾದ ಕಾಂಗ್ರೆಸ್

ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ದೀಕ್ಷಿತ್ ಅವರ ವಿರೋಧದ ನಡುವೆಯೂ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು...
ಶೀಲಾ ದೀಕ್ಷಿತ್
ಶೀಲಾ ದೀಕ್ಷಿತ್
ನವದೆಹಲಿ: ದೆಹಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ದೀಕ್ಷಿತ್ ಅವರ ವಿರೋಧದ ನಡುವೆಯೂ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಆಮ್ ಆದ್ಮಿ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಆಸಕ್ತಿ ತೋರುತ್ತಿದೆ.
ಮೈತ್ರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಆಪ್ ನಾಯಕರೊಂದಿಗೆ ಮತ್ತು ದೆಹಲಿ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ದೆಹಲಿ ಉಸ್ತುವಾರಿ ಪಿಸಿ ಚಾಕೋ ಅವರು ಹೇಳಿದ್ದಾರೆ.
ಎಎಪಿ ಜತೆಗೆ ಮೈತ್ರಿಗೆ ಸಂಬಂಧಿಸಿದಂತೆ ನಾನು ದೆಹಲಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸುತ್ತಿದ್ದೇನೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಂಡಿದೆ ಎಂದು ಚಾಕೋ ತಿಳಿಸಿದರು.
ದೆಹಲಿ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಭಾವನೆಯನ್ನು ಅರ್ಥ ಮಾಡಿಕೊಳ್ಳುವ ವಿಶ್ವಾಸವಿದೆ ಮತ್ತು ಆಪ್ ಜತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ಅಲ್ಲದೆ ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಚಾಕೋ ಹೇಳಿದ್ದಾರೆ.
ಆಪ್ ಜತೆ ಮೈತ್ರಿ ಬೇಡ ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದ ಶೀಲಾ ದೀಕ್ಷಿತ್ ಅವರು, ಆಪ್ ಜೊತೆಗಿನ ಮೈತ್ರಿ ದೀರ್ಘಾವಧಿಯಲ್ಲಿ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com