ಲೋಕಸಭೆ ಚುನಾವಣೆ: ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ

ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷ...
ಅಖಿಲೇಶ್ ಯಾದವ್ - ಮಾಯಾವತಿ
ಅಖಿಲೇಶ್ ಯಾದವ್ - ಮಾಯಾವತಿ
ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಮಂಗಳವಾರ ಘೋಷಿಸಿವೆ.
ಮಹಾರಾಷ್ಟ್ರದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಘೋಷಿಸಿದ ಎಸ್ಪಿ ಶಾಸಕ ಅಬು ಅಜ್ಮಿ ಅವರು, ಎರಡು ಪಕ್ಷಗಳು ಸಮಾಜದಲ್ಲಿ ಶೇ.85ರಿಂದ 90 ರಷ್ಟು ಜನರನ್ನು ಪ್ರತಿನಿಧಿಸುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಿಂದ ನಿರಾಶೆಗೊಂಡಿರುವ ಜನತೆ ನಮ್ಮ ಕೈಹಿಡಿಯಲಿದ್ದಾರೆ ಎಂದು ಹೇಳಿದ್ದಾರೆ.
ದೇಶದಲ್ಲಿ ಜಾತ್ಯತೀತತೆ ಅಳಿವಿನ ಅಂಚಿನಲ್ಲಿದೆ. ತಮ್ಮನ್ನು ತಾವು ಚೌಕಿದಾರ ಎಂದು ಕರೆದುಕೊಳ್ಳುವ ಜನ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಎಸ್ಪಿ-ಬಿಎಸ್ಪಿಯಂತಹ ಪ್ರಬಲ ಮೈತ್ರಿಯಿಂದ ಮಾತ್ರ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಾಧ್ಯ ಎಂದು ಅಜ್ಮಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com